ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಯೋಧರ ಗೌರವಿಸುವುದು ನಮ್ಮೆಲ್ಲರ ಹೊಣೆ: ಲಮಾಣಿ

Mainashree
Updated On : 18 Feb 2013, 10:27 am

ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಫೆ, 17
ದೇಶದ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಹೋರಾಟ ಮಾಡಿದ ವೀರ ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಅವರು ಭಾನುವಾರ ಪಟ್ಟಣದ ಹಳೆ ಬಸ್ ನಿಲ್ದಾಣದ ಸೈನಿಕ ಸಂಕೀರ್ಣದಲ್ಲಿ ಜರುಗಿದ ಮಾಜಿ ಸೈನಿಕರ ವಿವಿಧೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಮಾಜಿ ಸೈನಿಕರು ದೇಶದ ರಕ್ಷಣೆಗೆ ನಿಸ್ವಾರ್ಥದಿಂದ ಹೋರಾಟ ಮಾಡಿದ್ದಾರೆ. ಅವರು ತಮ್ಮ ನಿವೃತ್ತಿ ಜೀವನವನ್ನು ನೆಮ್ಮದಿಯಿಂದ ಕಳೆಯಲಿ. ತಮ್ಮ ಕುಟುಂಬದ ಚಿಂತೆ ತೊರೆದು, ಯೋಧರು ಇಡೀ ದೇಶವೇ ನನ್ನ ಕುಟುಂಬ ಎನ್ನುವ ಮನೋಭಾವನೆಯೊಂದಿಗೆ ಹೋರಾಟ ಮಾಡುತ್ತಿರುವುದು ಶ್ಲಾಘನೀಯ. ಅವರ ಹೋರಾಟಕ್ಕೆ ಬೆಲೆ ಕಟ್ಟಲಾಗದು ಎಂದರು.  
ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಮಾತನಾಡಿ, ರಾಷ್ಟ್ರದ ರಕ್ಷಣೆಗಾಗಿ ಹೋರಾಡಿದ ಮಹಾನ್ ಚೇತನಗಳನ್ನು ನಾವಿಂದು ಸ್ಮರಿಸಿಕೊಳ್ಳುವುದರ ಜತೆಯಲ್ಲಿ ಮಾಜಿ ಸೈನಿಕರ ಆಶೋತ್ತರಗಳಿಗೆ ಸ್ಪಂದಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದರು. ಮಾಜಿ ಶಾಸಕ ಎಸ್.ಎನ್. ಪಾಟೀಲ, ಜಿ.ಎಸ್. ಗಡ್ಡದೇವರಮಠ ಹಾಗೂ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ದುರೀಣ ಸನ್ನವೀರಪ್ಪ ಹಳ್ಳೆಪ್ಪನವರ, ಪುರಸಭೆಯ ಮಾಜಿ ಅಧ್ಯಕ್ಷೆ ಜಯಕ್ಕ ಕಳ್ಳಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಿ.ಎಸ್. ಹಿರೇಮಠ ಮಾತನಾಡಿದರು.
ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡರ, ವಿಶೇಷ ತಹಸೀಲ್ದಾರ್ ಆರ್.ವಿ. ಬೆಳ್ಳುಬ್ಬಿ, ಪಿಎಸ್‌ಐ ಶಿವಕುಮಾರ ಮುಚ್ಚಂಡಿ, ಪುರಸಭೆಯ ಮುಖ್ಯಾಧಿಕಾರಿ ವಿ.ಬಿ. ಬೂದಿಹಾಳ, ಮಾಜಿ ಸೈನಿಕ ಬಿ.ಎಫ್. ಉಪ್ಪಾರ, ಚಂದ್ರು ಹಿರೇಮಠ, ಮಾರುತಿ ಬಟ್ಟೂರ, ಐ.ಆರ್. ಸಂಕ್ಲಿಪೂರ, ಎಂ.ಎಸ್. ಕನವಳ್ಳಿ, ಶಂಕಿನ ದಾಸರ ಮುಂತಾದವರು ಭಾಗವಹಿಸಿದ್ದರು.
ಮಾಜಿ ಸುಬೇದಾರ ಸಿ.ಎಂ. ಹುಡೇದ ಸ್ವಾಗತಿಸಿದರು. ಮಂಜುನಾಥ ಬಂಡಿವಾಡ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement