ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮಕ್ಕಳು ಶಿಕ್ಷಣದಿಂದ ವಂಚಿತರಾಗದಿರಲಿ

Lingaraj Badiger
Updated On : 22 Feb 2013, 12:40 pm

ನರಗುಂದ: ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿರುತ್ತದೆ. ಅವರಿಗೆ ಸೂಕ್ಷ್ಮ ರೀತಿಯಲ್ಲಿ ಶಿಕ್ಷಣ ನೀಡಿದರೆ ವಿದ್ಯಾವಂತರಾಗಲು ಸಾಧ್ಯವಾಗುತ್ತದೆ ಎಂದು ಮುಂಡರಗಿ ಸಾಹಿತಿ ಡಾ. ನಿಂಗು ಸೊಲಗಿ ಹೇಳಿದರು.
ಈಚೆಗೆ ಅವರು ಪಟ್ಟಣದ ಬಸವೇಶ್ವರ ವಿದ್ಯಾಲಯದ ಕಿರಿಯ ಪ್ರಾಥಮಿಕ ಶಾಲೆಯ 3ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು. ಪ್ರತಿಯೊಂದು ಮಗುವಿನಲ್ಲಿ ಉತ್ತಮ ಪ್ರತಿಭೆಯಿರುತ್ತದೆ. ಆದರೆ ಪಾಲಕರು ಅದನ್ನು ಗುರುತಿಸದೇ ಕೆಲವು ಮಕ್ಕಳನ್ನು ಜಾಣರಿಲ್ಲವೆಂದು ಶಾಲೆ ಬಿಡಿಸುವುದನ್ನು ನಾವು ಇಂದಿಗೂ ಗ್ರಾಮೀಣ ಭಾಗದಲ್ಲಿ ಕಾಣುತ್ತೇವೆ. ಈ ರೀತಿ ಮಾಡುವುದರಿಂದ ಕೆಲವು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಪಾಲಕರು ಪ್ರತಿ ಮಗುವಿಗೂ ಶಿಕ್ಷಣ ಕೊಡಿಸಿದಾಗ ಮಾತ್ರ ಉತ್ತಮ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದರು.
ಸಾನ್ನಿಧ್ಯ ವಹಿಸಿದ್ದ ಭೈರನಹಟ್ಟಿ ಶಾಂತಲಿಂಗ ಶ್ರೀಗಳು ಆಶೀರ್ವಚನ ನೀಡಿದರು. ಶಿಕ್ಷಣಾಧಿಕಾರಿ ಮಂಗಳಾ ಪಾಟೀಲ, ರೇಖಾ ತುಪ್ಪದ, ಸಂಸ್ಥೆಯ ಅಧ್ಯಕ್ಷ ಸಿ.ಜಿ. ಕಂಠಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನಾಗಪ್ಪ ಕಂಠಿ, ಮಾಲಾ ಪಾಟೀಲ, ತಾಪಂ ಸದಸ್ಯ ವಿ.ಎನ್. ಕೊಳ್ಳಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement