ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಮದ್ದು: ಡಾ. ಪಾಟೀಲ್

Mainashree
Updated On : 25 Feb 2013, 10:44 am

ಲಕ್ಷ್ಮೇಶ್ವರ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಉತ್ತಮ ಮದ್ದಾಗಿದ್ದು, ಎಲ್ಲ ರೋಗಗಳಿಗೆ ಚಿಕಿತ್ಸೆ ನೀಡುವ ವೈದ್ಯ ಪದ್ಧತಿಯಾಗಿದೆ. ಯೋಗವಿದ್ದಲ್ಲಿ ರೋಗ ಬರಲಾರದು ಎಂದು ಡಾ. ಬಿ.ಜಿ. ಪಾಟೀಲ ಅಭಿಪ್ರಾಯಪಟ್ಟರು.
ಅವರು ಈಚೆಗೆ ಪಟ್ಟಣದ ಬಿಸಿಎನ್ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಶಿರಹಟ್ಟಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷರಿಗೆ ಜಿಪಂ, ಆಯುಷ್ ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಯೋಗ, ಆರೋಗ್ಯ ಪ್ರಶಿಕ್ಷಣ ಕಾರ್ಯಗಾರದಲ್ಲಿ ಮಾತನಾಡಿದರು. ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಸ್ವಸ್ಥ ಆರೋಗ್ಯ ಹೊಂದಬೇಕೆನ್ನುವುದು ಸರ್ಕಾರದ ನಿಲುವಾಗಿದೆ. ಅದಕ್ಕಾಗಿ ಭಾರತೀಯ ಪುರಾತನ ಪತಂಜಲಿ ಯೋಗ ಪದ್ಧತಿಯನ್ನು ಅನುಸರಿಸಿ ನಮಗೆ ಬರುವ ಅನೇಕ ರೋಗಗಳನ್ನು ನಿವಾರಿಸಿಕೊಳ್ಳಬಹುದಾಗಿದೆ. ಪ್ರಾಥಮಿಕ ಶಾಲಾ ಹಂತದಲ್ಲಿ ಯೋಗವನ್ನು ಕಲಿಸುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯದಲ್ಲಿ, ಶಿಕ್ಷಣದ ಗುಣಮಟ್ಟ ಹೆಚ್ಚಿಸುವಲ್ಲಿ, ಏಕಾಗ್ರತೆ ಹೊಂದಲು ಯೋಗವು ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಡಿ.ಎಂ. ಪೂಜಾರ ಮಾತನಾಡಿ, ಪ್ರಾಥಮಿಕ ಶಾಲಾ ಶಿಕ್ಷಕರು ಯೋಗವನ್ನು ಅಳವಡಿಸಿಕೊಂಡು ಅದನ್ನು ಮಕ್ಕಳಿಗೂ ತಿಳಿಸಿಕೊಡುವ ಮೂಲಕ ಅವರ ಶಿಕ್ಷಣ ಗುಣಮಟ್ಟ ಹೆಚ್ಚಿಸುವ ಪ್ರಯತ್ನ ಮಾಡಬೇಕು ಎಂದರು. ಡಾ. ಆರ್.ವಿ. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ನೋಡಲ್ ಅಧಿಕಾರಿ ಷರೀಫ್ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement