ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಿ
ನರಗುಂದ: ಪ್ರತಿಯೊಬ್ಬ ವಿದ್ಯಾರ್ಥಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು. ಅದರಿಂದ ವಿದ್ಯಾರ್ಥಿಗಳ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಡಾ. ಎಸ್.ವಿ. ಹಿತ್ತಲಮನಿ ಹೇಳಿದರು.
ಈಚೆಗೆ ಅವರು ಪಟ್ಟಣದ ಸಿದ್ಧೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಬಿಎ, ಬಿಕಾಂ, ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ 1 ದಿನದ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಮಾರ್ಗದರ್ಶನ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಬಗ್ಗೆ ಬಹಳ ಕಾಳಜಿ ವಹಿಸಿ ಅದರ ಕುರಿತು ಅಧ್ಯಯನ ಮತ್ತು ಯೋಗದ ಬಗ್ಗೆ ತಿಳಿದುಕೊಳ್ಳಲು ಮುಂದಾಗಬೇಕು. ಇದರಿಂದ ಅವರ ಭವಿಷ್ಯ ಉಜ್ಜಲವಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಇಂದು ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೂಚಿಸಿದರು. ಅತಿಥಿಗಳಾಗಿ ಆಗಮಿಸಿದ್ದ ಆಶಾ ಅಂಗಡಿ, ಆರ್.ಬಿ. ವನಹಳ್ಳಿ ಪ್ರಾಸ್ತಾವಿಕವಾಗಿ ಮತನಾಡಿದರು. ಪ್ರಾ. ನೀಲಾಂಬಿಕಾ ಪಟ್ಟಣಶೆಟ್ಟಿ, ಪ್ರೊ. ಖಲೀಲಅಹ್ಮದ್ ಚಿಕ್ಕೇರೂರ, ಪ್ರವೀಣಕುಮಾರ, ಎನ್.ಎನ್. ಕುರ್ಡೇಕರ ಉಪಸ್ಥಿತರಿದ್ದರು.