ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಚುನಾವಣೆ ದೃಷ್ಟಿಯ ಬಜೆಟ್: ಉದಾಸಿ

Lingaraj Badiger
Updated On : 1 Mar 2013, 11:06 am

ಗದಗ: ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಲೋಕಸಭೆಯಲ್ಲಿ ಗುರುವಾರ ಮಂಡಿಸಿದ ಬಜೆಟ್ ಸದ್ಯದಲ್ಲಿ ಬರಲಿರುವ ಕೆಲ ರಾಜ್ಯಗಳ ವಿಧಾನಸಭೆ ಹಾಗೂ ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡಿದೆ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದ್ದಾರೆ.
ಕೃಷಿ ಹಾಗೂ ಉತ್ಪಾದನೆ ಹೆಚ್ಚಳಕ್ಕೆ ದೂರದೃಷ್ಟಿ ಇಲ್ಲದೆ ಬಜೆಟ್ ಮಂಡನೆಯಾಗಿದೆ. ಸಣ್ಣ ಕೈಗಾರಿಕೆ, ಗುಡಿ ಕೈಗಾರಿಕೆ ಬಗ್ಗೆ ಪ್ರಸ್ತಾಪವಿಲ್ಲ. ಸಕಾಲಕ್ಕೆ ಮಳೆ ಬಾರದೆ ಗ್ರಾಮೀಣ ಕೂಲಿ ಕಾರ್ಮಿಕರ ವಲಸೆ ತಡೆಗಟ್ಟಲು ಏನೂ ಕ್ರಮ ಕೈಗೊಂಡಿಲ್ಲ. ಏರುತ್ತಿರುವ ಹಣದುಬ್ಬರ ಇಳಿಕೆಗೆ ಕ್ರಮವಿಲ್ಲ. ಕಪ್ಪು ಹಣ ವಾಪಸಾತಿಗೆ ಚಿಂತನೆ ಇಲ್ಲ, ರೈತರ ಬೆಳೆಗಳಿಗೆ ವೈಜ್ಞಾನಿಕ ದರ ಸಿಗುತ್ತಿಲ್ಲ. ಈ ಬಗ್ಗೆಯೂ ಮುನ್ನೋಟಗಳಿಲ್ಲ. ಹೀಗಾಗಿ, ಇದು ಚುನಾವಣೆ ಕನಸಿನ ಬಜೆಟ್ ಎಂದು ಉದಾಸಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ರೇಷ್ಮೆ ಬೆಳೆ ರಫ್ತು ಹಾಗೂ ಸರ್ಕಾರಿ ಸ್ವಾಮ್ಯದ ಮಹಿಳಾ ಬ್ಯಾಂಕ್ ಸ್ಥಾಪಿಸಲು ನಿರ್ಧರಿಸಿದ್ದನ್ನು, ಕೈಗಾರಿಕಾ ಕಾರಿಡಾರ್ ಸ್ಥಾಪನೆಗೆ ಒತ್ತು ಕೊಟ್ಟಿದ್ದನ್ನು ಸ್ವಾಗತಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement