ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನೀರಿಗೆ ರು. 1400 ಕೋಟಿ ಸ್ವಾಗತಾರ್ಹ

Lingaraj Badiger
Updated On : 1 Mar 2013, 11:06 am

ಕನ್ನಡಪ್ರಭ ವಾರ್ತೆ, ಗದಗ, ಫೆ. 28
ಗುರುವಾರ ಕೇಂದ್ರದ ಹಣಕಾಸು ಸಚಿವ ಪಿ. ಚಿದಂಬರಂ ಮಂಡಿಸಿದ ಬಜೆಟ್‌ನಲ್ಲಿ ಶುದ್ಧ ಕುಡಿವ ನೀರಿನ ಘಟಕಗಳ ಸ್ಥಾಪನೆಗಾಗಿ ರು. 1400 ಕೋಟಿ ಕಾಯ್ದಿರಿಸಿರುವ ಕ್ರಮ ಸ್ವಾಗತಾರ್ಹ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಇಲ್ಲಿನ ಕಾಟನ್ ಸೇಲ್ ಸೊಸೈಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ಕೆ, ಸಾರ್ವಜನಿಕರಿಗೆ ಶುದ್ಧ ಕುಡಿವ ನೀರು ಪೂರೈಸುವ ದೂರದೃಷ್ಟಿ ಇಟ್ಟುಕೊಂಡು ಯುಪಿಎ ಸರ್ಕಾರ ಕೆ.ಎಚ್. ಪ್ರತಿಷ್ಠಾನ ಹಾಗೂ ರೂರಲ್ ಮೆಡಿಕಲ್ ಸರ್ವಿಸ್ ಸೊಸೈಟಿ ಮಾದರಿಯಲ್ಲೇ ದೇಶಾದ್ಯಂತ ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಲು ಕ್ರಮ ಕೈಗೊಂಡಿದೆ. ಇದು ಪ್ರತಿಷ್ಠಾನಕ್ಕೆ ಸಂದ ಗೌರವ ಎಂದರು.
ಸಾವಿರ ಹಳ್ಳಿಗೆ ಯೋಜನೆ
ಜಿಲ್ಲೆಯಲ್ಲಿ 23 ತಿಂಗಳಲ್ಲಿ 100ಕ್ಕೂ ಹೆಚ್ಚು ಘಟಕಗಳನ್ನು ಸ್ಥಾಪಿಸಲಾಗಿದೆ. ಅವುಗಳ ವೀಕ್ಷಣೆಗಾಗಿ ಸೋನಿಯಾ ಗಾಂಧಿ ಅವರು ನಾಥೋರ ಹಾಗೂ ಶರ್ಮಾ ನೇತೃತ್ವದ ಒಂದು ತಂಡವನ್ನು ಜಿಲ್ಲೆಗೆ ಕಳಿಸಿದ್ದರು. ಅಈ ಬಾರಿಯ ಬಜೆಟ್‌ನಲ್ಲಿ ರು. 1400 ಕೋಟಿ ವೆಚ್ಚದಲ್ಲಿ ದೇಶಾದ್ಯಂತ ಸಾವಿರಕ್ಕೂ ಅಧಿಕ ಹಳ್ಳಿಗಳಲ್ಲಿ ಶುದ್ಧ ನೀರಿನ ಘಟಕ ರಚಿಸಲು ಕ್ರಮ ಕೈಗೊಂಡಿದ್ದು ಸಂತಸ ತಂದಿದೆ ಎಂದರು. ಕಳೆದ 23 ತಿಂಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಶುದ್ಧ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಘಟಕಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಜಿ.ಎಸ್. ಪಾಟೀಲ, ಅಶೋಕ ಮಂದಾಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement