ಗದಗ

ಗ್ರಾಮ ನೈರ್ಮಲ್ಯ: ವಂಟಕರ ಮನವಿ

ಕನ್ನಡಪ್ರಭ ವಾರ್ತೆ, ಮುಳಗುಂದ, ಜ. 23
ಪಟ್ಟಣದ ಓಣಿಗಳು ಸ್ವಚ್ಛ ಹಾಗೂ ಶುಚಿತ್ವವಾಗಿರಲು ಕೇವಲ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಂದ ಸಾಧ್ಯವಿಲ್ಲ. ಬದಲಾಗಿ ಸಾರ್ವಜನಿಕರು ಪಪಂನೊಂದಿಗೆ ಕೈಜೊಡಿಸಿ ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಚರಂಡಿಗೆ ಎಸೆಯದೇ ಪಪಂ ತಳ್ಳು ಗಾಡಿ ಅಥವಾ ತ್ಯಾಜ್ಯ ಸಂಗ್ರಹ ತೊಟ್ಟಿಗೆ ಹಾಕುವುದರಿಂದ ನೈರ್ಮಲ್ಯ ಗ್ರಾಮವಾಗಿಸಲು ಸಾಧ್ಯ ಎಂದು ಪಪಂ ಅಧ್ಯಕ್ಷ  ವಿ.ಪಿ. ವಂಟಕರ ಅಭಿಪ್ರಾಯಪಟ್ಟರು.
ಈಚೆಗೆ ಅವರು ಸ್ಥಳಿಯ ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಉತ್ತಮ ಆಡಳಿತ ಮಾಸಾಚರಣೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಸರ್ಕಾರ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ. ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆಗೊಳಿಸುವಂತೆ ಮನವಿ ಮಾಡಿದರು. ಪಪಂ ಮುಖ್ಯಾಧಿಕಾರಿ ವಿ.ಜಿ. ಸುಲಾಖೆ ಮಾತನಾಡಿ, ಎಲ್ಲಿಂದರಲ್ಲಿ ಬಿಸಾಕುವ ಕಸ ಪರಿಸರಕ್ಕೆ ಹಾನಿಯಾಗುವದರ ಜತಗೆ ಸಾಂಕ್ರಾಮಿಕ ಕಾಯಿಲೆ ಹರಡುವಂತೆ ಮಾಡುತ್ತದೆ. ಆದ್ದರಿಂದ ಪಪಂನೊಂದಿಗೆ ಸಾರ್ವಜನಿಕರು ಸಹಕರಿಸಿ ಮನೆಯಲ್ಲಿನ ತ್ಯಾಜ್ಯವನ್ನು ಪಪಂ ಗಾಡಿಗೆ ಹಾಕಬೇಕು ಎಂದರು.
ಈ ಸಂದರ್ಭದಲ್ಲಿ ಪಪಂ ಸದಸ್ಯ ಕುಬೇರಪ್ಪ ಗಡಾದ, ಕೆ.ಎಲ್. ಕರಿಗೌಡ, ಮಲ್ಲವ್ವ ಹಾರೋಗೆರಿ, ಬಸವರಾಜ ಬಾತಖಾನಿ, ವಿ.ವಿ. ವಾಲಿ, ಪಪಂ ಸಿಬ್ಬಂದಿ ಮಂಜುಳಾ ಗಾಣಿಗೇರ, ಎಂ.ಸಿ. ಸಜ್ಜನ, ಮುನಿರ್ ನದ್ದಿಮುಲ್ಲಾ ಹಾಗೂ ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು. ಪಟ್ಟಣ ಪಂಚಾಯತಿ ಆವರಣದಿಂದ ಪ್ರಾರಂಭವಾದ ಉತ್ತಮ ಆಡಳಿತ ಮಾಸಾಚರಣೆ ಜಾಥಾ ಊರಿನ ಪ್ರಮುಖ ಬೀದಿಯಲ್ಲಿ ಸಂಚರಿಸಿ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಗ್ ಶಾಕ್: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಿವಿ ಫ್ರೆಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ‘ನನ್ನ ಸರದಿ ಯಾವಾಗ?’ ಎಂದು ಕೂಗಿದ ಪುರುಷರು!

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ