ಗದಗ

ಮತದಾನ ಜಾಗೃತಿ ಅವಶ್ಯ: ಆವೀನ

ಗದಗ: ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸುವಲ್ಲಿ ಮತದಾರರ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಟಿ.ಎಚ್. ಆವೀನ ಹೇಳಿದರು.
ಅವರು ಶುಕ್ರವಾರ ನಗರದ ಕೆ.ಎಚ್. ಪಾಟೀಲ್ ಸಭಾಭವನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮತದಾನದ ಕುರಿತು ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವುದು ಅವಶ್ಯ. ಪ್ರಜಾಪ್ರಭುತ್ವ ಕಟ್ಟುವಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದ್ದು ಪ್ರತಿಯೊಬ್ಬ ಮತದಾರರು ಅರ್ಹ ಮತ್ತು ಜನಪರ ಕಾಳಜಿ ಹೊಂದಿರುವ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಂತೆ ಕರೆ ನೀಡಿದರು.
ವಿ.ಡಿ.ಎಸ್.ಟಿ. ಹೆಣ್ಣುಮಕ್ಕಳ ಪಪೂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎಸ್.ಐ. ಮೇಟಿ ಉಪನ್ಯಾಸ ನೀಡಿ, ಜ. 25, 2011 ರಿಂದ ದೇಶದಲ್ಲಿ ಜಾರಿಗೆ ತಂದಿರುವ ಈ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ಯುವ ಪೀಳಿಗೆಯಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವಲ್ಲಿ ಅತ್ಯವಶ್ಯಕವಾಗಿ ಪರಿಣಮಿಸಿದೆ. ದೇಶದಲ್ಲಿರುವ 85 ಕೋಟಿಗೂ ಅಧಿಕ ಮತದಾರರಿಗೆ ತಮ್ಮ ಮತದಾನದ ಮಹತ್ವ ಅರಿಯುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಮತದಾರರು ತಮ್ಮ ಮತದಾನದ ಮೌಲ್ಯವನ್ನು ಅರಿತುಕೊಳ್ಳುವ ಮೂಲಕ ಮತದಾನದ ಪ್ರಕ್ರಿಯೆಯಲ್ಲಿ ಉತ್ಸುಕತೆಯಿಂದ ಭಾಗವಹಿಸುವುದು ಪ್ರಮುಖವಾಗಿದೆ. ಇಂದಿನ ಆಧುನಿಕ ಯುಗದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು, ಜನಪ್ರತಿನಿಧಿಗಳು ಇವೆರಡೂ ರಾಷ್ಟ್ರವೆಂಬ ರಥದ ಗಾಲಿಗಳಿದ್ದಂತೆ, ಒಂದಕ್ಕೇನಾದರೂ ದಕ್ಕೆಯಾದಲ್ಲಿ ರಥದ ವಿನಾಶ ಖಂಡಿತ.
ಇಂದು ರಾಷ್ಟ್ರದ ಏಳ್ಗೆಗೆ ಪ್ರಮುಖವಾಗಿರುವ ಮತವು ಜಾತಿ, ಹಣದ, ಹೆಂಡದ ಅಮೀಶಗಳಿಗೆ ಮಾರಾಟವಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಕಾರಣ ಯುವಕರು ಈ ಕುರಿತು ಜಾಗೃತಿ ಹೊಂದುವ ಮೂಲಕ ನಾಳೆಯ ನಾಡನ್ನು ಸುಂದರವಾಗಿಸಲು ತಮ್ಮ ಅಮೂಲ್ಯವಾದ ಮತವನ್ನು ಸಮಾಜ ಸೇವಾ ಕಳಕಳಿ ಹೊಂದಿದ ಪ್ರತಿನಿಧಿಗೆ ನೀಡುವ ಮೂಲಕ ಸಮಾಜ ಸುಧಾರಣೆಗೆ ಅವಕಾಶ ನೀಡುವಂತೆ ಕೋರಿದರು. ಜಿಪಂ ಸಿಇಓ ವೀರಣ್ಣ ತುರಮರಿ ಮಾತನಾಡಿ, ಭಾರತದ ಪ್ರಜಾಪ್ರಭುತ್ವ ವಿಶ್ವಕ್ಕೆ ಮಾದರಿಯಾಗಿದ್ದು, ಮತದಾನವನ್ನು ಪವಿತ್ರ ಕರ್ತವ್ಯವೆಂದು ಪರಿಗಣಿಸಿ ಯಾವುದೇ ಆಸೆಗಳಿಗೆ ಒಳಗಾಗದೇ ಮತ ಚಲಾಯಿಸಬೇಕು. ಹಾಗೂ ಗೌಪ್ಯ ಮತದಾನ ವ್ಯವಸ್ಥೆಗೆ ಪ್ರಾಮುಖ್ಯತೆ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಪಾಂಡುರಂಗ ನಾಯಕ ಮತದಾರರ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ಪ್ರತಿಯೊಬ್ಬ ಮತದಾರನು ಮತದಾರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಆದ್ಯತೆ ನೀಡಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ನೂತನ ನೋಂದಾಯಿತ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ನಗರದ ಮುನ್ಸಿಪಲ್ ಹೈಸ್ಕೂಲ್ ಆವರಣದಿಂದ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಡಿ. ಶರಣಪ್ಪ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ತಹಸೀಲ್ದಾರ್ ಎಸ್.ಡಿ. ಗಣಾಚಾರಿ, ಪ್ರಭಾರಿ ಉಪವಿಭಾಗಾಧಿಕಾರಿ ಶಿವರಾಜ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಸ್. ಗೌಡರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಬಾರಾಟಕ್ಕೆ ಉಪಸ್ಥಿತರಿದ್ದರು. ಉಪವಿಭಾಗಾಧಿಕಾರಿ ಇಸ್ಲಾವುದ್ದೀನ ಗದ್ಯಾಳ ಸ್ವಾಗತಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ