ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಆರೋಪಿಗಳ ಶೀಘ್ರ ಸೆರೆ: ಚರಣ ರಡ್ಡಿ

Mainashree
Updated On : 27 Jan 2013, 11:18 am

ನರಗುಂದ: ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ನಡೆದ ಕೋಮು ಗಲಭೆಯಿಂದಾಗಿ ಅಶಾಂತಿಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಸೂಕ್ತ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಬೆಳಗಾವಿ ಐಜಿಪಿ ಚರಣ ರಡ್ಡಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ನಡೆದ ಗಲಭೆ ಸಂಬಂಧ ಎರಡೂ ಕೋಮಿನವರು ಪ್ರಕರಣ ದಾಖಲಿಸಿದ್ದಾರೆ. ಒಟ್ಟು 12 ಜನರ ಮೇಲೆ ಪ್ರಕರಣಗಳು ದಾಖಲಾಗಿದ್ದು, ಇವರನ್ನು ವಿಚಾರಣೆ ಮಾಡಲು ಮೂರು ತಂಡಗಳನ್ನು ರಚಿಸಲಾಗಿದೆ. ಮುಂದೆ ಕೋಮು ಗಲಭೆಯಾಗದಂತೆ ಎಚ್ಚರ ವಹಿಸಲಾಗುವುದು. ಪಟ್ಟಣದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ 250ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ತಪ್ಪಿತಸ್ಥರು ಯಾವುದೇ ಕೋಮಿಗೆ ಸೇರಿರಲಿ, ಮುಲಾಜಿಲ್ಲದೆ ಅವರ ಮೇಲೆ ಕ್ರಮ ಜರುಗಿಸಲಾಗುವುದು ಎಂದರು. ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಜಿಪಂ ಸಿಇಓ ವೀರಣ್ಣ ತುರಮರಿ, ಎಸ್ಪಿ ಎಸ್.ಡಿ. ಶರಣಪ್ಪ, ಡಿಎಸ್ಪಿ ವಿ.ಬಿ. ಕುಮಾರ ಉಪಸ್ಥಿತರಿದ್ದರು.
ಬಿಕೋ ಎಂದ ಮಾರುಕಟ್ಟೆ
ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಎಲ್ಲ ಅಂಗಡಿ ಮುಂಗಟ್ಟುಗಳು ಯಥಾಸ್ಥಿತಿ ಪ್ರಾರಂಭವಾಗಿದ್ದವು, ಮಧ್ನಾಹ್ನ 2 ಗಂಟೆಗೆ ಶುಕ್ರವಾರ ಕೋಮು ಗಲಭೆಯಲ್ಲಿ ಗಾಯಗೊಂಡ ಯುವಕನೋರ್ವ ಸಾವನ್ನಪ್ಪಿದ್ದಾನೆ ಎಂಬ ವದಂತಿ ಹರಡಿದ್ದರಿಂದ ವ್ಯಾಪಾರಸ್ಥರು ಅಂಗಡಿ ಮುಚ್ಚಿದರು. ಗಾಯಗೊಂಡಿರುವ ಯುವಕ ಆರೋಗ್ಯವಾಗಿದ್ದು, ಪ್ರಾಣಾಪಾಯ ಇಲ್ಲ ಎಂದು ಸಿಪಿಐ ಪ್ರಶಾಂತ್ ತಿಳಿಸಿದ್ದಾರೆ. ಶನಿವಾರ ಲೋದಿಗಲ್ಲಿ ಸೇರಿದಂತೆ ಪಟ್ಟಣದಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ ಹಿನ್ನೆಲೆಯಲ್ಲಿ ಜನದಟ್ಟಣೆ ಕಡಿಮೆ ಆಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement