ಸೈನಿಕರ ಕೊಡುಗೆ ಅಪಾರ
ನರಗುಂದ: ಇಂದು ದೇಶದ 120 ಕೋಟಿ ಜನತೆ ನೆಮ್ಮದಿಯಾಗಿ ಬದುಕಲುದೇಶದ ಗಡಿ ಕಾಯುವ ಸೈನಿಕರೇ ಕಾರಣರಾಗಿದ್ದಾರೆ. ಅವರ ಕೊಡುಗೆ ಅಪಾರವಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಅವರು ಶನಿವಾರ ಪಟ್ಟಣದ ಪೊಲೀಸ್ ಮೈದಾನದಲ್ಲಿ 64ನೇ ಪ್ರಜಾರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದರು ಭಾರತೀಯರು ಏನೆಂಬುದನ್ನು ಇಡೀ ವಿಶ್ವಕ್ಕೆ ತೋರಿಸಿದ್ದಾರೆ. ನಾವು ಎಲ್ಲ ಕ್ಷೇತ್ರಗಳಲ್ಲಿ ಆರ್ಥಿಕವಾಗಿ ಮುಂದುವರೆಯುತ್ತಿದ್ದು, ನಮಗೆ ಸ್ವಾತಂತ್ರ್ಯ ತಂದು ಕೊಟ್ಟ ಮಹನೀಯರನ್ನು ನೆನಪಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದರು. ತಹಸೀಲ್ದಾರ ಪಿ.ಐ. ಗಣಾಚಾರಿ ಧ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಲವು ಮಹನೀಯರನ್ನು ಸನ್ಮಾನಿಸಲಾಯಿತು. ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಚಂದ್ರಶೇಖರ ಕೋಟಿ, ಉಪಾಧ್ಯಕ್ಷೆ ಉಮೇಶ ಯಮೋಜಿ, ಜಿಪಂ ಸದಸ್ಯೆ ಶಾಂತಾ ದಂಡಿನ, ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ, ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ ಹುಡೇದ, ಪ್ರಕಾಶ ಪಟ್ಟಣಶೆಟ್ಟಿ, ವಾಸು ಜೋಗಣ್ಣವರ, ಮಲ್ಲವ್ವ ಗುಂಜಾಳ, ಮಟಗೇರ, ಎಸ್.ಬಿ. ಕರಿಗೌಡ್ರ, ವಿ.ಎಸ್. ಡಾಣೆ, ಶಿಕ್ಷಣಾಧಿಕಾರಿ ಮಂಗಳಾ ಪಾಟೀಲ್, ಶಿಶು ಅಭಿವೃದ್ಧಿ ಅಧಿಕಾರಿ ಟಿ.ಜಿ. ಶಂಕರಮೂರ್ತಿ, ತಾಪಂ ಅಧಿಕಾರಿ ಬಿ.ವಿ. ಪಾಟೀಲ್, ಪುರಸಭೆ ಅಧಿಕಾರಿ ಎಸ್. ರಾಜಶೇಖರ, ಎಪಿಎಂಸಿ ಕಾರ್ಯದರ್ಶಿ ಜಿ.ಎ. ಬುರಡಿ, ವಿ.ಬಿ. ಕುಂಬಾರ, ಲೋಕೋಪಯೋಗಿ ಅಧಿಕಾರಿ ಎಸ್.ಎಂ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ಬಿ.ಆರ್. ಪಾಟೀಲ ಸ್ವಾಗತಿಸಿ, ನಿರೂಪಿಸಿದರು. ರವಿ ಗಡಿಯಪ್ಪನವರ ವಂದಿಸಿದರು.