ಫೆ.14ರಂದು ಮಾತಾಪಿತ ದಿನ ಆಚರಣೆ: ಮುತಾಲಿಕ್
ಗದಗ: ಫೆ.14ರ ಪ್ರೇಮಿಗಳ ದಿನವನ್ನು ಶ್ರೀರಾಮ ಸೇನೆಯ ವತಿಯಿಂದ ಮಾತಾಪಿತರನ್ನು ಪೂಜಿಸುವ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು. ಭಾನುವಾರ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಗಿ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹಲವಾರು ವರ್ಷಗಳಿಂದ ಫೆ.14ರಂದು ಆಚರಿಸುವ ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸುತ್ತಾ ಬಂದಿರುವ ಶ್ರೀರಾಮಸೇನೆ, ಈ ಸಂಸ್ಕೃತಿ ನಮ್ಮ ದೇಶದಲ್ಲಿ ನಿಲ್ಲುವವರೆಗೂ ಹೋರಾಟ ಮಾಡಲಿದೆ. ಈ ಕುರಿತು ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಕರಪತ್ರದ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಭಾರತೀಯ ಸಂಸ್ಕೃತಿ ಹುಟ್ಟುಹಾಕುವ ನಿಟ್ಟಿನಲ್ಲಿ ಫೆ.14 ಅನ್ನು ಮಾತಾಪಿತರ ಪೂಜ್ಯನೀಯ ದಿನವನ್ನಾಗಿ ಆಚರಿಸಲು ಶ್ರೀರಾಮಸೇನೆ ನಿರ್ಧರಿಸಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.