ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮನೆ ಹಂಚಿಕೆಯಲ್ಲಿ ತಾರತಮ್ಯ: ಆರೋಪ

Rashmi Kasaragodu
Updated On : 29 Jan 2013, 1:37 am




ಶಿರಹಟ್ಟಿ: ಶಿರಹಟ್ಟಿ ಪಟ್ಟಣ ಪಂಚಾಯಿತಿಗೆ ಸರ್ಕಾರದಿಂದ 80 ಆಶ್ರಯ ಮನೆಗಳು ಮಂಜೂರಾಗಿದ್ದು, ಯೋಗ್ಯ ಮತ್ತು ನಿರ್ಗತಿಕ ಫಲಾನುಭವಿಗಳನ್ನು ಗುರುತಿಸದೇ, ಸ್ಥಿತಿವಂತರಿಗೆ, ಶ್ರೀಮಂತರಿಗೆ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಯಲ್ಲಪ್ಪಗೌಡ ಅಣ್ಣಿಗೇರಿ ನೇತೃತ್ವದಲ್ಲಿ ಸೋಮವಾರ ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಯಲ್ಲಪ್ಪಗೌಡ ಅಣ್ಣಿಗೇರಿ, ಸಂತೋಷ ಕುರಿ ಮಾತನಾಡಿ, ಪಪಂ ಸದಸ್ಯರನ್ನು ಕಡೆಗಣಿಸಿ ಮುಖ್ಯಾಧಿಕಾರಿ ಹಾಗೂ ಪಪಂ ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಾ ಬಂದಿದ್ದಾರೆ. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆಂದು ದೂರಿದರು. ಪಟ್ಟಣದ ಅಭಿವೃದ್ಧಿಗೆ ಕೋಟ್ಯಂತರ ಅನುದಾನ ಹರಿದು ಬಂದಿದ್ದು, ಗುಣಮಟ್ಟದ ಕಾಮಗಾರಿ ನಡೆಸದೇ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ಶೇ. 22.75ರ ಅನುದಾನದಲ್ಲಿಯೂ ಭಾರಿ ಅವ್ಯವಹಾರ ನಡೆದಿದ್ದು, ಮಾನ್ಯ ಜಿಲ್ಲಾಧಿಕಾರಿಗಳು ವಿಳಂಬ ಮಾಡದೇ ಸಮಗ್ರ ತನಿಖೆಗೆ ಆದೇಶ ಮಾಡಬೇಕು. ಪಪಂ ಕಾರ್ಯಾಲಯಕ್ಕೆ ಭೇಟಿ ನೀಡಿ ತಾವೇ ಪರಿಶೀಲನೆಗೆ ಮುಂದಾಗಬೇಕೆಂದು ಒತ್ತಾಯಿಸಿದರು.
ಮುಖ್ಯಾಧಿಕಾರಿ ಡಿ.ಟಿ. ದೊಡಮನಿ ಅವರು ಪಪಂ ಅಧ್ಯಕ್ಷ ಹುಮಾಯೂನ ಮಾಗಡಿ ಅವರ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಅಧಿಕಾರಿಗಳ ಕಾರ್ಯವೈಖರಿಯನ್ನು ಗಮನಿಸಿ, ತಪ್ಪುಕಂಡುಬಂದಲ್ಲಿ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗುವಂತೆ ಹೇಳಿದರು. 8 ದಿನಗಳ ಒಳಗಾಗಿ ಪಪಂ ಕಾರ್ಯಾಲಯದಲ್ಲಿ ನಡೆದಿರುವ ಭ್ರಷ್ಟಾಚಾರ ಮತ್ತು ಅನುದಾನ ದುರ್ಬಳಕೆ ವಿರುದ್ಧ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸದಿದ್ದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಸಿದ್ದಾರೆ.
ಶಿರಸ್ಥೇದಾರ ಕೆ.ಎಫ್. ರಿತ್ತಿ ಮನವಿ ಸ್ವೀಕರಿಸಿ ಮಾತನಾಡಿ, ಜಿಲ್ಲಾಧಿಕಾರಿಗಳಿಗೆ ಮನವಿ ಕಳುಹಿಸಿಕೊಡುವುದಾಗಿ ತಿಳಿಸಿದರು. ರಾಮಣ್ಣ ಡಂಬಳ, ಪರಶುರಾಮ ಹಾಲಪ್ಪನವರ, ಬಸವರಾಜ ಚಿಕ್ಕತೋಟದ, ತಿರುಕಪ್ಪ ಗಾಡಿ, ಸುರೇಶ ಕುರಿ, ಜಗದೀಶ ಇಟ್ಟೇಕಾರ, ಎಫ್.ಎಸ್. ರಟ್ಟಿಹಳ್ಳಿ, ನಿಂಗಪ್ಪ ತುಳಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement