ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಆ. 14ರಿಂದ ಗದಗ ಉತ್ಸವ-2013

Lingaraj Badiger
Updated On : 18 Jul 2013, 11:56 am

ಗದಗ: ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಗದಗ ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಪಂ, ಮಹೇಶ್ವರಿ ವಿವಿಧೋದ್ದೇಶಗಳ ಮಹಿಳಾ ಮಂಡಳ ಗದಗ ಹಾಗೂ ನಬಾರ್ಡ್ ಗದಗ ಇವರ ಆಶ್ರಯದಲ್ಲಿ ಆ.14ರಿಂದ 18ರ ವರೆಗೆ ನಗರದ ಜ. ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಗದಗ ಉತ್ಸವ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ. ಸಿದ್ಧ ಉಡುಪು, ಎಲೆಕ್ಟ್ರಾನಿಕ್ಸ್‌ಗಳು, ಕೃಷಿ ಉಪಕರಣ, ಪೀಠೋಪಕರಣ, ಅಲಂಕಾರಿಕ ವಸ್ತುಗಳು, ಹೀಗೆ ವೈವಿಧ್ಯಪೂರ್ಣ ವಸ್ತುಗಳ ಪ್ರದರ್ಶನ, ಮಾರಾಟ ನಡೆಯುವುದು. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ. ಮಳಿಗೆ ಕಾಯ್ದಿರಿಸಲು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಗೆ ಸಂಪರ್ಕಿಸಬೇಕೆಂದು ಸಂಸ್ಥೆಯ ಅಧ್ಯಕ್ಷ ರಾಜಶೇಖರ ಶಿರೂರ, ಸಂಗಮೇಶ ದುಂದೂರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement