ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ತಾಯಿಯನ್ನು ಪೂಜಿಸುವುದು ಪುಣ್ಯದ ಕಾರ್ಯ

Mainashree
Updated On : 23 Jul 2013, 11:15 am

ಗದಗ: ಗುಡಿಯಲ್ಲಿರದ ದೇವರನ್ನು ಹುಡುಕುತ್ತಾ ಜಗತ್ತು ಸುತ್ತುವುದಕ್ಕಿಂತ ಮನೆಯಲ್ಲಿರುವ ತಾಯಿ ದೇವರನ್ನು ಪೂಜಿಸುವ ಮನೋಭಾವವನ್ನು ಪ್ರತಿಯೊಬ್ಬರು ಬೆಳಸಿಕೊಳ್ಳಬೇಕಿದೆ ಎಂದು ಮಾಜಿ ಶಿಕ್ಷಣ ಸಚಿವ ವಿಪ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.        
ಅವರು ಈಚೆಗೆ ವಿದ್ಯಾದಾನ ಸಮಿತಿಯ ಬಿ.ಇಡಿ. ಕಾಲೇಜು ಸಭಾಂಗಣದಲ್ಲಿ ಅವ್ವ ಸೇವಾ ಟ್ರಸ್ಟ್ ಆಶ್ರಯದಲ್ಲಿ ಆಗಸ್ಟ್ 10ರಂದು ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆವ ಬೆಳಗಾವಿ ವಿಭಾಗ ಮಟ್ಟದ ಪ್ರತಿಭಾವಂತ ಅಂಧ ಅಂಗವಿಕಲ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿದರು. ನಿವೃತ್ತ ಉಪನಿರ್ದೇಶಕ ಎ.ಎನ್. ನಾಗರಳ್ಳಿ ಮಾತನಾಡಿದರು.
ಡಾ.ಬಸವರಾಜ ಧಾರವಾಡ ಪ್ರಾಸ್ತಾವಿಕ ಮಾತನಾಡಿ, ಆ. 10 ರಂದು ನಡೆವ ಕಾರ್ಯಕ್ರಮದ ಸಾನಿಧ್ಯವನ್ನು ತೋಂಟದ ಶ್ರೀಗಳು ವಹಿಸುವರು. ಅಧ್ಯಕ್ಷತೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ವಹಿಸುವರು. ಉದ್ಘಾಟನೆಯನ್ನು ವಿಶ್ವ ಸಂಸ್ಥೆಯ ಶೌರ್ಯ ಪ್ರಶಸ್ತಿ ವಿಜೇತೆ ಅಶ್ವಿನಿ ಅಂಗಡಿ ಮಾಡುವರು. ಅತಿಥಿಗಳಾಗಿ ಮೈಸೂರಿನ ಖ್ಯಾತ ವಿಮರ್ಶಕ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ಆಗಮಿಸುವರು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement