ಆ. 1ರಂದು ಸಂಘದ ಸಭೆ
ಗದಗ: ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಸಭೆ ಆ. 1ರ ಬೆಳಗ್ಗೆ 11ಕ್ಕೆ ನಗರದ ಹುಡ್ಕೋ ಕಾಲೋನಿಯಲ್ಲಿರುವ ಸಚ್ಚಿದಾನಂದ ಮಠದ ಸಭಾಂಗಣದಲ್ಲಿ ಕರೆಯಲಾಗಿದೆ. ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಸಿ. ಗಾಣಿಗೇರ ಸಭೆಯ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಹಿರಿಯ ನಾಗರಿಕರ ಉಪಸಮಿತಿ ಅಧ್ಯಕ್ಷ ಜಿ.ಎಸ್. ಹಿರೇಮಠ ಉಪಸ್ಥಿತರಿರುವರು. ನಿವೃತ್ತರ ಹಾಗೂ ಹಿರಿಯ ನಾಗರಿಕರ ಕುಂದು ಕೊರತೆಗಳ ಕುರಿತು ಹಾಗೂ ಸಂಘದ ಕಟ್ಟಡ ಕಾಮಗಾರಿಯ ಉದ್ಘಾಟನೆ ಹಾಗೂ 6ನೇ ವಾರ್ಷಿಕೋತ್ಸವ ಆಚರಿಸುವ ಬಗ್ಗೆ ಹಾಗೂ ಇನ್ನಿತರ ಮಹತ್ವದ ವಿಷಯಗಳನ್ನು ಚರ್ಚಿಸಲಾಗುವುದು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಬಿ. ಹೂಗಾರ, ಹೆಚ್ಚುವರಿ ಕಾರ್ಯದರ್ಶಿ ರಾಜಶೇಖರ ಕರಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.