ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸೌಲಭ್ಯಗಳ ಸದುಪಯೋಗ ಪಡೆಯಿರಿ

Lingaraj Badiger
Updated On : 31 Jul 2013, 11:02 am

ಹೊಳೆಆಲೂರ: ವಿದ್ಯಾರ್ಥಿಗಳು ಸರ್ಕಾರ, ಶಿಕ್ಷಕರು ಮತ್ತು ಸಂಸ್ಥೆಯ ವತಿಯಿಂದ ದೊರಕುವ ಸೌಲಭ್ಯಗಳ ಸದುಪಯೋಗ ಪಡೆಯಬೇಕೆಂದು ಕಲ್ಮೇಶ್ವರ ವಿದ್ಯಾಪ್ರಸಾರಕ ಸಮಿತಿಯ ಅಧ್ಯಕ್ಷ ಚನ್ನಪ್ಪ ಬೀರನೂರ ಹೇಳಿದರು.
ಈಚೆಗೆ ಅವರು ಸ್ಥಳೀಯ ಕಲ್ಮೇಶ್ವರ ಬಾಲಕಿಯರ ಪ್ರೌಢ ಶಾಲೆಯಲ್ಲಿ  ಸರ್ಕಾರದಿಂದ ಕೊಡಮಾಡಿದ ಪಠ್ಯಪುಸ್ತಕ ಮತ್ತು ಸಂಸ್ಥೆಯವರು ನೀಡಿದ ಉಚಿತ ಸಮವಸ್ತ್ರಗಳನ್ನು ಎಲ್ಲ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರು ಬಡ ವಿದ್ಯಾರ್ಥಿಗಳಿಗೆ ನೀಡಿದ ನೋಟ್‌ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ಪ್ರಸ್ತುತ ಸಾಲಿನಲ್ಲಿ ಸಂಸ್ಥೆಯ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಲಾಗುತ್ತಿದೆ. ಅಲ್ಲದೆ ಶಿಕ್ಷಕ ಸಿಬ್ಬಂದಿ ಇಲ್ಲಿ ಓದುತ್ತಿರುವ ಬಡವಿದ್ಯಾರ್ಥಿಗಳಿಗೆ ನೋಟ ಪುಸ್ತಕಗಳನ್ನು ನೀಡಿದ್ದಾರೆ. ಈ ಎಲ್ಲ ಅನುಕೂಲತೆಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉನ್ನತಗುರಿ ಮುಟ್ಟಿ, ಜೀವನದಲ್ಲಿ ಯಶಸ್ಸನ್ನು ಸಾಧಿಸಿ ಸಂಸ್ಥೆಯ, ಶಿಕ್ಷಕರ ಮತ್ತು ಗ್ರಾಮದ ಹೆಸರನ್ನು ತರುವಂತಾಗಬೇಕು ಎಂದರು. ಸಂಸ್ಥೆಯ ಕಾರ್ಯದರ್ಶಿ ಶೆಲ್ಲಿಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸಂಸ್ಥೆಯು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಡಿ.ಎಸ್. ಶೆಲ್ಲಿಕೇರಿ, ಸದಸ್ಯ ಎಂ.ಎನ್. ತೇಜಿಗೌಡ್ರ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಎ.ಬಿ. ಲಮಾಣಿ ಸ್ವಾಗತಿಸಿದರರು. ಸಂಗಣ್ಣ ಶೆಲ್ಲಿಕೇರಿ ನಿರೂಪಿಸಿದರು. ಸಿ.ಆರ್. ತಳವಾರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement