ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ವಿದ್ಯುತ್ ತಗುಲಿ ವಿದ್ಯಾರ್ಥಿನಿ ಸಾವು

Lingaraj Badiger
Updated On : 1 Aug 2013, 11:53 am

ಗದಗ:  ಶಾಲೆ ಮುಗಿಸಿಕೊಂಡು ಮರಳಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದು ವಿದ್ಯಾರ್ಥಿನಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಸಂಜೆ ಗದಗ ತಾಲೂಕಿನ ಸೊರಟೂರ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ರೇಣುಕಾ ಸುಣಗಾರ (16) ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿನಿ ಅದೇ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಯಲ್ಲಿ ಓದುತ್ತಿದ್ದು, ಶಾಲೆ ಮುಗಿಸಿಕೊಂಡು ಮರಳಿ ಮನಗೆ ಹೋಗುವಾಗ ಈ ಅವಘಡ ಸಂಭವಿಸಿದ್ದು, ಘಟನೆಯಿಂದ ಗ್ರಾಮದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement