ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಪಾಟೀಲ
ನರಗುಂದ: ಪ್ರತಿಯೊಬ್ಬ ಮಕ್ಕಳ ಭವಿಷ್ಯ ಉಜ್ಜಲಗೊಳ್ಳಬೇಕಾದರೆ ಉತ್ತಮವಾಗಿ ಅಭ್ಯಾಸ ಮಾಡಬೇಕು. ಇದರಿಂದ ಮಕ್ಕಳ ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದು ಬಾಪುಗೌಡ ಪಾಟೀಲ ಹೇಳಿದರು.
ಅವರು ಸೋಮವಾರ ತಾಲೂಕಿನ ಬನಹಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2013-14ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ವರ್ಷ ಸರ್ಕಾರ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಸಾವಿರಾರು ಕೋಟಿ ಖರ್ಚು ಮಾಡುತ್ತಿದೆ. ಅದಕ್ಕೆ ಪ್ರತಿಯೊಂದು ಮಕ್ಕಳು ಆ ಯೋಜನೆ ಸದುಪಯೋಗ ಪಡೆದುಕೊಂಡು ಒಳ್ಳೆಯ ಶಿಕ್ಷಣ ಕಲಿಯಲು ಮುಂದಾದರೆ ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗುವುದು ಎಂದರು.
ಎಸ್.ಎಸ್. ಹಿರೇಮಠ ಪ್ರಾಸ್ತಾವಿಕ ಮಾತನಾಡಿದರು.
ಶಾಲಾ ಪ್ರಾರಂಭೋತ್ಸದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸುವ ಮೂಲಕ ವಿಶೇಷವಾಗಿ ಶಾಲಾ ಪ್ರಾರಂಭೋತ್ಸವ ಆಚರಿಸಲಾಯಿತು. ಎಸ್.ಆರ್. ನಿಡಗುಂದಿ ಸ್ವಾಗತಿಸಿದರು. ಆರ್.ಜಿ. ಜುನ್ನಪ್ಪನವರ ನಿರೂಪಿಸಿದರು. ಎಚ್.ಎಸ್. ತಳವಾರ ವಂದಿಸಿದರು.