ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಾರಂಭ
ನರಗುಂದ: ತಾಲೂಕಿನ ಶಿರೋಳ ಗ್ರಾಮದಲ್ಲಿರುವ ಶಿವಚಿದಂಬರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಶ್ರಯದ ಸೃಜನಶೀಲ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಾಲೆ ಹಲವು ವರ್ಷದಿಂದ ಗ್ರಾಮಾಂತರ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿದೆ.
2013-14ನೇ ಸಾಲಿನಲ್ಲಿ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ, ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜವಾಹರ ನವೋದಯ, ಸೈನಿಕ ಶಾಲೆ, ಮೊರಾರ್ಜಿ ದೇಸಾಯಿ ಹಾಗೂ ಇನ್ನುಳಿದ ವಸತಿ ವಿದ್ಯಾಲಯಗಳಿಗೆ ಪ್ರವೇಶ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು. ಪ್ರವೇಶಗಳು ಪ್ರಾರಂಭಗೊಂಡಿದ್ದು, ಆಸಕ್ತರು ಪ್ರವೇಶ ಪಡೆಯಲು ಮೊ. 9008201422, 9480659056 ಇಲ್ಲಿಗೆ ಸಂಪರ್ಕಿಸುವಂತೆ ಚಿದಂಬರ ನಿಂಬರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.