ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮಾಹಿತಿ, ಶಿಕ್ಷಣ, ಸಂವಹನ ತರಬೇತಿ

Mainashree
Updated On : 5 Jun 2013, 11:22 am

ಗದಗ: ಈಚೆಗೆ ನಗರದ 5ನೇ ವಾರ್ಡ್‌ನ ನೇಕಾರ ಕಾಲೋನಿಯಲ್ಲಿನ ಬನ್ನಿಕಟ್ಟಿ ಹತ್ತಿರದಲ್ಲಿ ಉತ್ತರ ಕರ್ನಾಟಕ ನಗರ ವಲಯ ಬಂಡವಾಳ ಹೂಡಿಕಾ ಕಾರ್ಯಕ್ರಮದಡಿ ಮಾಹಿತಿ, ಶಿಕ್ಷಣ ಮತ್ತು ಸಂವಹನ(ಐಇಸಿ) ತರಬೇತಿ ಹಮ್ಮಿಕೊಳ್ಳಲಾಗಿತ್ತು.
ನಗರಸಭೆ ಸದಸ್ಯ ಶ್ರೀನಿವಾಸ ಕರಿ ಅಧ್ಯಕ್ಷತೆ ವಹಿಸಿದ್ದರು. ಎಸ್.ಎಂ. ಹೂಗಾರ ಮಾತನಾಡಿ, ಬಡತನ ನಿರ್ಮೂಲನಾ ಯೋಜನೆಯಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಸ್ವ-ಸಹಾಯ ಸಂಘದ ಸದಸ್ಯರು ಆದಾಯ ತರುವ ಕಾರ್ಯಕ್ರಮ ಹಮ್ಮಿಕೊಂಡು ವೈಯಕ್ತಿಕ ಅಭಿವೃದ್ಧಿ, ಸಮಾಜದಲ್ಲಿ 4 ಜನರಿಗೆ ಉದ್ಯೋಗ ಕಲ್ಪಿಸುವಂತಹ ಹೊಸ-ಹೊಸ ಉದ್ಯೋಗ ಹಮ್ಮಿಕೊಂಡರೆ ಹಣಕಾಸಿನ ನೆರವನ್ನು ಸಂಸ್ಥೆ ಮೂಲಕ ನೀಡುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement