ಸೊಳ್ಳೆ ನಿರ್ಮೂಲನೆಯಿಂದ ಡೆಂಘೀ ತಡೆ
ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಜೂ. 4
ಸೊಳ್ಳೆಗಳನ್ನು ನಿಯಂತ್ರಣ ಮಾಡುವುದರಿಂದ ಚಿಕೂನ್‌ಗುನ್ಯಾ, ಡೆಂಘೀಜ್ವರ, ಮಲೇರಿಯಾದಂತಹ ರೋಗಗಳನ್ನು ಸಂಪೂರ್ಣವಾಗಿ ತಡೆಗಟ್ಟಬಹುದಾಗಿದೆ ಎಂದು ಪುರಸಭೆಯ ಆರೋಗ್ಯ ನಿರೀಕ್ಷಕ ಆನಂದ ಬದಿ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು ಅಂಗನವಾಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಡೆಂಘೀ ಜ್ವರವು ರಾಜ್ಯದಲ್ಲಿ ಅನೇಕ ಜನರನ್ನು ಬಲಿ ತೆಗೆದುಕೊಂಡಿದೆ. ಈ ಮಾರಣಾಂತಿಕ ಕಾಯಿಲೆಯನ್ನು ತಡೆಗಟ್ಟಲು ಸರ್ಕಾರ ಅನೇಕ ಕ್ರಮ ಕೈಗೊಂಡಿದೆ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ.ಎಸ್.ಪಿ.ಖಾಟೆವಾಲೆ, ಎಸ್.ಬಿ. ಜವಾಯಿ, ಎಸ್.ಬಿ. ಸಾಮುದ್ರಿ, ಪುರಸಭೆಯ ಮುಖ್ಯಾಧಿಕಾರಿ ವಿ.ಬಿ. ಬೂದಿಹಾಳ, ಬಿ. ಮಂಜುನಾಥ, ಎನ್.ಎಂ. ಹಾದಿಮನಿ, ಎಂ.ಬಿ. ರಡ್ಡೇರ, ಬಿ.ಎಸ್. ಹಿರೇಮಠ ಹಾಗೂ ಸರ್ಕಾರಿ ಆಸ್ಪತ್ರೆಯ ಆರೋಗ್ಯ ಸಹಾಯಕರು ಮತ್ತು ಅಂಗನವಾಡಿ ಕಾರ್ಯಕರ್ತರು ಈ ಸಂದರ್ಭ ಹಾಜರಿದ್ದರು.