ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಡ್ಯಾಂ ಕ್ರಸ್ಟ್ ಗೇಟ್ ದುರಸ್ತಿ ಕಾಮಗಾರಿಗೆ ಆಕ್ಷೇಪ

Mainashree
Updated On : 8 Jun 2013, 10:57 am

ಹಗರಿಬೊಮ್ಮನಹಳ್ಳಿ: ತಾಲೂಕಿನ ಜಲಾಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ತಾಲೂಕಿನ ಮಾಲ್ವಿ ಜಲಾಶಯಕ್ಕೆ ನೀರು ಹರಿದುಬರುತ್ತಿದೆ. ಇಂತಹ ಸಮಯದಲ್ಲಿ ಡ್ಯಾಂನ ಕ್ರಸ್ಟ್ ಗೇಟ್, ಗೇಟ್ ತಳಪಾಯದಲ್ಲಿ ದುರಸ್ತಿ ಕಾಮಗಾರಿ ಆರಂಭಿಸಿರುವ ಬಗ್ಗೆ ಜಿಪಂ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಉಲುವತ್ತಿ ಸೋಮಲಿಂಗಪ್ಪ ಆಕ್ಷೇಪವ್ಯಕ್ತಪಡಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಲ್ವಿ ಡ್ಯಾಂ ಬಳಿ ಪತ್ರಕರ್ತರ ಜೊತೆ ಮಾತನಾಡಿದ ಸೋಮಲಿಂಗಪ್ಪ, ಡ್ಯಾಂನ ಕ್ರಸ್ಟ್ ಗೇಟ್ ಮತ್ತು ಜಲಾಶಯದ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಬೇಸಿಗೆ ಕಾಲದಲ್ಲಿಯೆ ಪೂರ್ಣಗೊಳಿಸಬೇಕಿತ್ತು. ಆದರೆ ನೀರಾವರಿ ಇಲಾಖೆಯ ಅಧಿಕಾರಿಗಳು ಮುಂಗಾರು ಹಂಗಾಮು ಆರಂಭವಾಗಿದ್ದರೂ ದುರಸ್ತಿ ಕಾಮಗಾರಿಗಳು ಪೂರ್ಣಗೊಂಡಿಲ್ಲ. ನೀರಾವರಿ ಇಲಾಖೆಯ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಶಾಮೀಲಾಗಿ ಸರ್ಕಾರದಿಂದ ಮಂಜೂರಾಗಿರುವ ಅನುದಾನ ಕಬಳಿಸುವ ಕುತಂತ್ರ ಎಂದು ಆರೋಪಿಸಿದರು. ಪ್ರತಿವರ್ಷ ಡ್ಯಾಂಗೆ ನೀರು ಬರುವ ಸಮಯದಲ್ಲಿ ಕಾಮಗಾರಿ ಆರಂಭಿಸಲಾಗುತ್ತದೆ. ಬಹುತೇಕ ಕಾಮಗಾರಿ ಕಳಪೆಯಿಂದ ಕೂಡಿರುತ್ತದೆ. ಈ ಬಗ್ಗೆ ತನಿಖೆ ಮಾಡಬೇಕು ಎಂದು ಆಗ್ರಹಿಸಿದ ಅವರು, ಗುರುವಾರ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ಶುಕ್ರವಾರ ಬೆಳಗಿನ ಜಾವ ಜಲಾಶಯಕ್ಕೆ ಮೂರು ಅಡಿಗಳಷ್ಟು ನೀರು ಬಂದಿದೆ. ಆದರೆ, ಕ್ರಸ್ಟ್ ಗೇಟ್ ದುರಸ್ತಿ ಕಾರ್ಯಕ್ಕಾಗಿ ಗೇಟ್‌ಗಳನ್ನು ತೆರೆದಿದ್ದರಿಂದ ನೀರು ಹಳ್ಳಕ್ಕೆ ಹರಿದುಹೋಗಿದೆ ಎಂದು ದೂರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement