ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಗಜೇಂದ್ರಗಡ: ಶೇ. 80.50 ಮತದಾನ

Parashurama
Updated On : 8 Mar 2013, 11:10 am

ಕನ್ನಡಪ್ರಭ ವಾರ್ತೆ, ಗಜೇಂದ್ರಗಡ, ಮಾ. 7
ಸ್ಥಳೀಯ ಪುರಸಭೆಯ 23 ವಾರ್ಡ್‌ಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಶೇ. 80.50 ಮತದಾನ ನಡೆದಿದೆ.
ಬೆಳಗ್ಗೆ 7ಗಂಟೆಗೆ ಪ್ರಾರಂಭವಾದ ಮತದಾನವು ನಿಧಾನವಾಗಿ ರಂಗೇರತೊಡಗಿತು. ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಎಲ್ಲ ಮತಕೇಂದ್ರಗಳಲ್ಲಿ ಶೇ. 50ಕ್ಕೂ ಹೆಚ್ಚು ಮತ ಚಲಾವಣೆಯಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ 20ನೇ ವಾರ್ಡ್‌ನಲ್ಲಿ ಮತ ಚಲಾಯಿಸಿದರು.
ಪರಿಷ್ಕೃತ ಮತದಾರರ ಯಾದಿ ಪ್ರಕಾರ ಒಂದು ವಾರ್ಡ್‌ನಲ್ಲಿದ್ದವರನ್ನು ಮತ್ತೊಂದು ವಾರ್ಡ್‌ಗೆ ಸೇರಿಸಲಾಗಿದೆ. ಗಂಡ, ಹೆಂಡತಿ, ತಾಯಿ, ಮಕ್ಕಳನ್ನು ಬೇರ್ಪಡಿಸಲಾಗಿದೆ. ಮಹಿಳೆಯ ಹೆಸರಿನ ಮುಂದೆ ಪುರುಷರ ಹೆಸರಿದೆ. ಕೆಲವು ಮತದಾರರ ಹೆಸರು ಮತದಾರರ ಪಟ್ಟಿಯಿಂದ ನಾಪತ್ತೆಯಾಗಿರುವುದು ಕಂಡುಬಂತು. ಮತದಾನದಿಂದ ವಂಚಿತರಾದವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಜರುಗಿತು.
ಅತಿ ಸೂಕ್ಷ್ಮ ಮತಗಟ್ಟೆ ಕೇಂದ್ರಗಳಾದ 1, 20ನೇ ವಾರ್ಡ್‌ನಲ್ಲಿ ಸಂಜೆ 4 ರವರೆಗೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ವಾರ್ಡ್‌ಗಳಲ್ಲಿ ಮೃತ ವ್ಯಕ್ತಿಯ ಹೆಸರಿನಲ್ಲಿ ಮತ ಚಲಾವಣೆ, ಚುನಾವಣೆ ನಡೆಯುತ್ತಿರುವ ಕೇಂದ್ರಗಳ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು, ಅಭ್ಯರ್ಥಿಗಳು ಮತದಾರರನ್ನು ಮನವೊಲಿಸುವ ಪ್ರಯತ್ನ ವ್ಯಾಪಕವಾಗಿ ನಡೆಯಿತು.
ಶಾಂತಿಯುತವಾಗಿ ಚುನಾವಣೆ ನಡೆಯಲು ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments