ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮಹಿಳೆಯರೇ ಜಾಗೃತರಾಗಿ: ಶೈಲಜಾ

Parashurama
Updated On : 10 Mar 2013, 12:29 pm

ಕನ್ನಡಪ್ರಭ ವಾರ್ತೆ, ಗದಗ. ಮಾ. 9
ಶತಮಾನಗಳಿಂದ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆಯೇ ಇಂದಿನ ಮಹಿಳೆಯರ ಜಾಗೃತಿಗೆ ಮೂಲ ಕಾರಣವಾಗಿದೆ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದುವರಿಯಲು ಇಂಥಹ ದಿನಾಚರಣೆಗಳು ಪೂರಕವಾಗಬೇಕು ಎಂದು ನ್ಯಾಯವಾದಿ ಶೈಲಜಾ ಹಿರೇಮಠ ಹೇಳಿದರು.
ಅವರು ಶುಕ್ರವಾರ ಸ್ಥಳೀಯ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಮಹಿಳಾ ಸಂಘದ ಆಶ್ರಯದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಲಿಂಗ ತಾರತಮ್ಯ, ಬಾಲ್ಯವಿವಾಹ ಹಾಗೂ ಭ್ರೂಣ ಹತ್ಯೆಗಳಂತಹ ಸಮಸ್ಯೆಗಳಿಗೆ ಇಂದು ಮಹಿಳೆಯರಿಗೆ ಶಿಕ್ಷಣದ ಕೊರತೆಯೇ ಕಾರಣ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 1975, ಮಾರ್ಚ್ 8 ರಂದು ನ್ಯೂಜಿಲ್ಯಾಂಡ್ ದೇಶದಲ್ಲಿ ಪ್ರಥಮ ಬಾರಿಗೆ ಆರಂಭಗೊಂಡು ಇಂದಿಗೆ 38 ವರ್ಷ ಗತಿಸಿದರೂ ಭಾರತದಂತಹ ಆಧ್ಯಾತ್ಮಿಕ ಹಿನ್ನೆಲೆ ಹೊಂದಿದ ರಾಷ್ಟ್ರದಲ್ಲಿ ಮಾನವೀಯ ಮೌಲ್ಯಗಳ ಕೊರತೆಯಿಂದ ಇಂದು ಮಹಿಳೆಯರಿಗಾಗಿ ಇರುವ ಹಕ್ಕುಗಳು ಹಾಗೂ ಕಾನೂನುಗಳು ಪೂರ್ಣ ಪ್ರಮಾಣದಲ್ಲಿ ಚಲಾವಣೆಯಾಗುತ್ತಿಲ್ಲ. ಆದ್ದರಿಂದ ಪ್ರತಿಯೊಬ್ಬ ಮಹಿಳೆಯರು ಸುಶಿಕ್ಷಿತರಾಗುವುದರ ಮೂಲಕ ಜಾಗೃತಿ ಹೊಂದಿ ಪ್ರತಿಯೊಂದು ಕ್ಷೇತ್ರದಲ್ಲಿರುವ ಹಕ್ಕುಗಳನ್ನು ಪಡೆದುಕೊಳ್ಳುವಂತಹ ಸಾಮರ್ಥ್ಯ ಹೊಂದಬೇಕು ಎಂದು ಹೇಳಿದರು.  
ಅಧ್ಯಕ್ಷತೆ ವಹಿಸಿದ್ದ ಪ್ರಾ. ಬಿ.ಬಿ. ಗೌಡರ ಮಹಿಳೆಯರಿಗೆ ಇರುವ ಹಕ್ಕುಗಳ ಕುರಿತು ಮಾತನಾಡಿದರು. ನಿರ್ಮಲಾ ಪಾಟೀಲ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರೊ. ಜಿ.ಜಿ. ಪಾಟೀಲ ಸ್ವಾಗತಿಸಿದರು. ಪ್ರೊ. ಎಸ್.ಎಸ್. ಹುಬ್ಬಳ್ಳಿ ನಿರೂಪಿಸಿದರು. ಪ್ರೊ. ಎಂ.ಸಿ. ಹಿರೇಮಠ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments