ಕುಮಾರಣ್ಣನ ಚಮತ್ಕಾರ ನಡೆಯಲಿಲ್ಲ
ಗದಗ: ಗದಗ-ಬೆಟಗೇರಿ ನಗರಸಭೆಯ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಚಮತ್ಕಾರ ನಡೆಯಲಿಲ್ಲ. ಹಾಗಾಗಿ ನಗರಸಭೆಯಲ್ಲಿ ಈ ಬಾರಿ ಜೆಡಿಎಸ್ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಮೇಲ್ನೋಟಕ್ಕೆ ಜೆಡಿಎಸ್ ಪ್ರಬಲವಾಗಿ ಕಂಡು ಬಂದಿತ್ತಾದರೂ ಗದಗ ನಗರದಲ್ಲಿ ಸೂಕ್ತ ನಾಯಕತ್ವದ ಕೊರತೆಯಿಂದ ಪಕ್ಷಕ್ಕೆ ಹಿನ್ನಡೆಯಾಗಿದೆ. ಪಕ್ಷವನ್ನು ಕೈ ಹಿಡಿದು ಮುನ್ನಡೆಸುವಂತಹ ಪ್ರಭಾವಿಗಳನ್ನು ಪಕ್ಷದಲ್ಲಿ ಬೆಳೆಸುವಲ್ಲಿ ಆ ಪಕ್ಷದ ನಾಯಕರು ಸಂಪೂರ್ಣ ವಿಫಲವಾಗಿರುವುದರಿಂದಲೇ ಈ ಬಾರಿಯೂ ಚುನಾವಣೆಯಲ್ಲಿ ಜೆಡಿಎಸ್ ನೆಲಕಚ್ಚಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.