ದಿಕ್ಸೂಚಿ ಫಲಿತಾಂಶ: ಎಚ್ಕೆ
ಗದಗ: ಸ್ಥಳೀಯ ಸಂಸ್ಥೆಗಳ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಫಲಿತಾಂಶದ ಬಳಿಕ 'ಕನ್ನಡಪ್ರಭ'ದೊಂದಿಗೆ ಮಾತನಾಡಿದ ಅವರು, ರಾಜ್ಯದ 1900ಕ್ಕೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ಗೆ ಗೆಲುವನ್ನು ನೀಡುವ ಮೂಲಕ ಜನತೆ ಆಶೀರ್ವಾದ ಮಾಡಿದ್ದಾರೆ. ಇದು ಮುಂದಿನ ದಿನಗಳಲ್ಲಿ ಕಾಂಗ್ರೆಸ್ಗೆ ಒಳ್ಳೆಯ ಭವಿಷ್ಯವಿದೆ ಎನ್ನುವ ಮುನ್ಸೂಚನೆ ನೀಡಿದೆ. ಬಿಜೆಪಿ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ಬಡವರ ನಿರ್ಲಕ್ಷ್ಯವೇ ಮತದಾರರು ಬಿಜೆಪಿಯಿಂದ ದೂರವಾಗಲು ಕಾರಣ. ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದ್ದು, ಹಲವೆಡೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆದಿದೆ.
ಗದಗ, ಬೆಟಗೇರಿ ನಗರಸಭೆಯಲ್ಲಿ 20 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ವತಂತ್ರವಾಗಿ ಉತ್ತಮ ಆಡಳಿತ ನೀಡುತ್ತೇವೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.