ನರಗುಂದ, ಗಜೇಂದ್ರಗಡ: ಬಿಜೆಪಿಗೆ ಜೈ
ಜಿಲ್ಲೆಯ ನರಗುಂದ ಮತ್ತು ಗಜೇಂದ್ರಗಡ ಪುರಸಭೆಗಳಲ್ಲಿ ಮಾತ್ರ ಅಧಿಕಾರ ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ, ಮಾಜಿ ಸಚಿವ ಸಿ.ಸಿ. ಪಾಟೀಲ ತಮ್ಮ ವೈಯಕ್ತಿಕ ಪ್ರಭಾವದಿಂದಲೇ ಪಕ್ಷವನ್ನು ದಡ ಸೇರಿಸಿ, ಪಕ್ಷದ ಮಾನ ಉಳಿಸಿದ್ದಾರೆ. ಗದಗ-ಬೆಟಗೇರಿ ನಗರಸಭೆ, ಮುಳಗುಂದ ಪಟ್ಟಣ ಪಂಚಾಯ್ತಿ ಹಾಗೂ ಮುಂಡರಗಿ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಗದಗ ಶಾಸಕ ಶ್ರೀಶೈಲಪ್ಪ ಬಿದರೂರ ಹಾಗೂ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಸಂಪೂರ್ಣ ಹಿನ್ನೆಡೆ ಅನುಭವಿಸಿದ್ದು, ಫಲಿತಾಂಶದಿಂದ ಸ್ಪಷ್ಟವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.