ರೋಣ: ಗೆದ್ದವರ ವಿಜಯೋತ್ಸವ
ರೋಣ: ಪುರಸಭೆಯ 23 ವಾರ್ಡ್ಗಳ ಪೈಕಿ 16ರಲ್ಲಿ ಕಾಂಗ್ರೆಸ್, ಐದರಲ್ಲಿ ಬಿಜೆಪಿ, ತಲಾ ಒಂದರಲ್ಲಿ ಬಿಎಸ್ಸಾರ್ ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿಗಳು ಗೆಲವು ಸಾಧಿಸಿದ್ದು, ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಪಟಾಕಿ ಸಿಡಿಸಿ, ಪರಸ್ಪರ ಗುಲಾಲು ಎರಚಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಗೆದ್ದವರು ತಮ್ಮ ವಾರ್ಡ್ಗಳಿಗೆ ಹೋಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಮೆರವಣಿಗೆ ಮೂಲಕ ಸಾಗಿ ಬಂದ ವಿಜೇತ ಅಭ್ಯರ್ಥಿಗಳನ್ನು ರಸ್ತೆಯ ಎರಡೂ ಬದಿ ಹಾಗೂ ಕಟ್ಟಡಗಳ ಮುಂದೆ ನಿಂತು ಜನ ವೀಕ್ಷಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.