ರೋಣ ಪುರಸಭೆ ಕಾಂಗ್ರೆಸ್ ವಶ
ರೋಣ: ಪಟ್ಟಣದ ಸರ್ಕಾರಿ ಪಪೂ ಕಾಲೇಜಿನಲ್ಲಿ ಸೋಮವಾರ ನಡೆದ ಮತ ಎಣಿಕೆಯಲ್ಲಿ ರೋಣ ಪುರಸಭೆಯ ಒಟ್ಟು 23 ವಾರ್ಡ್ಗಳ ಪೈಕಿ 16ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ವಿಜಯ ಪತಾಕೆ ಹಾರಿಸಿ, ಪುರಸಭೆ ಅಧಿಕಾರವನ್ನು ತನ್ನ ಮಡಿಲಿಗೆ ಹಾಕಿಕೊಂಡಿತು. 23 ವಾರ್ಡ್ಗಳಿಗೆ 67 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದರು. ಅದರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ತಲಾ 23 ಅಭ್ಯರ್ಥಿಗಳು, ಕೆಜೆಪಿ ಮತ್ತು ಬಿಎಸ್ಆರ್ ತಲಾ 5, ಜೆಡಿಎಸ್ನಿಂದ 7 ಮತ್ತು ಪಕ್ಷೇತರರಾಗಿ 4 ಅಭ್ಯರ್ಥಿಗಳು ಕಣದಲ್ಲಿದ್ದರು. 23 ವಾರ್ಡ್ಗಳ ಪೈಕಿ ಕಾಂಗ್ರೆಸ್ 16 ರಲ್ಲಿ, ಬಿಜೆಪಿ 5 ರಲ್ಲಿ, ಬಿಎಸ್ಆರ್ 1 ಮತ್ತು ಪಕ್ಷೇತರ 1 ಅಭ್ಯರ್ಥಿ ಗೆಲವು ಸಾಧಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.