ಇಂದು ಕೆ.ಎಚ್.ಪಾಟೀಲ ಜಯಂತಿ
ಗದಗ: ಸಹಕಾರ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲರ 89ನೇ ಜಯಂತಿಯನ್ನು ಮಾ. 16ರ ಬೆಳಗ್ಗೆ 10.30ಕ್ಕೆ ನಗರದ ಎಪಿಎಂಸಿ ಪ್ರಾಂಗಣದಲ್ಲಿರುವ ವಿವೇಕಾನಂದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಉದ್ಘಾಟನೆಯನ್ನು ರಾಜಸ್ಥಾನದ ರಾಜ್ಯಪಾಲ ಮಾರ್ಗರೇಟ್ ಆಳ್ವ ನೆರವೇರಿಸುವರು. ಮಾಜಿ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸುವರು.
ಅತಿಥಿಗಳಾಗಿ ರಾಜ್ಯ ವಿಧಾನಸಭೆಯ ಮಾಜಿ ಸಭಾಪತಿ ರಮೇಶಕುಮಾರ, ವಿಪ ಮಾಜಿ ಸದಸ್ಯ ಹಾಗೂ ವೀರಶೈವ ಮಹಾಸಭಾದ ಅಧ್ಯಕ್ಷ ಎನ್. ತಿಪ್ಪಣ್ಣ ಹಾಗೂ ಭಾರತ ಸರ್ಕಾರದ ನೆಹರೂ ಯುವ ಕೇಂದ್ರದ ಡೈರೆಕ್ಟರ್ ಜನರಲ್ ಸಲೀಂ ಅಹ್ಮದ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಗದಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ, ಮಾಜಿ ಸಚಿವ ಬಿ.ಆರ್. ಯಾವಗಲ್, ಮಾಜಿ ಶಾಸಕ ಜಿ.ಎಸ್. ಪಾಟೀಲ, ವಿಪ ಸದಸ್ಯ ಶ್ರೀನಿವಾಸ ಮಾನೆ, ಕೆಪಿಸಿಸಿ ಸದಸ್ಯ ವಿ.ಕೆ. ಕುರಡಗಿ, ಎಚ್.ಆರ್. ನಾಯಕ, ಕೆಪಿಸಿಸಿ ಪರಿಶಿಷ್ಟ ಪಂಗಡದ ರಾಜ್ಯ ಘಟಕದ ಅಧ್ಯಕ್ಷ ಟಿ. ಈಶ್ವರ ಹಾಗೂ ಮಾಜಿ ಶಾಸಕ ಡಿ.ಆರ್. ಪಾಟೀಲ ಪಾಲ್ಗೊಳ್ಳಲಿದ್ದಾರೆಂದು ರವಿ ಮೂಲಿಮನಿ ಹಾಗೂ ಐ.ಎಸ್. ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--