ಇಂದು ಮಹಿಳಾ ಜಾಗೃತಿ ವೇದಿಕೆ ಉದ್ಘಾಟನೆ
ಮುಂಡರಗಿ: ಸ್ಥಳೀಯ ಜ. ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಅಖಿಲ ಕರ್ನಾಟಕ ಮಹಿಳಾ ಜಾಗೃತಿ ವೇದಿಕೆಯ ಉದ್ಘಾಟನೆ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಾ. 17ರಂದು ಬೆಳಗ್ಗೆ 11.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸಾನ್ನಿಧ್ಯವನ್ನು ನಾಡೋಜ ಡಾ. ಅನ್ನದಾನೀಶ್ವರ ಶ್ರೀಗಳು ವಹಿಸುವರು. ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಮಹಿಳಾ ಜಾಗೃತಿ ವೇದಿಕೆಯ ಅಧ್ಯಕ್ಷೆ ಭಾಗ್ಯಲಕ್ಷ್ಮೀ ಬಿಳಿಮಗ್ಗದ ವಹಿಸುವರು. ಉಪನ್ಯಾಸವನ್ನು ನಿವೃತ್ತ ಪ್ರಾಧ್ಯಾಪಕ ಪ್ರೊ. ಕೆ.ಎಚ್. ಬೇಲೂರ ನೀಡುವರು. ಸುಧಾ ಸಾಹುಕಾರ, ಹೇಮಾ ತಂಗೋಡ, ಲಕ್ಷ್ಮೀದೇವಿ ಮಾಗಡಿ, ಅಮರವ್ವ ಲದ್ದಿ ಹಾಗೂ ಕಮಲಾಕ್ಷಮ್ಮ ಶೀರಿ ಅವರನ್ನು ಸನ್ಮಾನಿಸಲಾಗುವುದು. ಕರ್ನಾಟಕ ಜಾನಪದ ಕಲಾ ತಂಡದವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.