ಸಮ್ಮೇಳನ ಅಗತ್ಯವಿರಲಿಲ್ಲ: ಕುಲಕರ್ಣಿ
ನರಗುಂದ: ತಾಲೂಕು ಸಾಹಿತ್ಯ ಪರಿಷತ್ನ ವತಿಯಿಂದ ತಾಲೂಕು ಸಾಹಿತ್ಯ ಸಮ್ಮೇಳನ ಮಾಡಿದ್ದನ್ನು ಸ್ವಾಗತಿಸುತ್ತೇನೆ. ಆದರೆ, ಈ ಭಾಗದಲ್ಲಿ 2-3 ವರ್ಷದ ತೀವ್ರ ಬರಗಾಲದಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ಸ್ವ ಪ್ರದೇಶದಲ್ಲಿ ಉದ್ಯೋಗ ಇಲ್ಲದಿರುವುದರಿಂದ ಹೊರ ರಾಜ್ಯಗಳಿಗೆ ಗುಳೆ ಹೋಗಿದ್ದು, ಇಂಥ ಸಂದರ್ಭದಲ್ಲಿ ರು. 8-10 ಲಕ್ಷ ಖರ್ಚು ಮಾಡಿ ಸಮ್ಮೇಳನ ಮಾಡುವ ಆವಶ್ಯಕತೆಯಿರಲಿಲ್ಲ ಎಂದು ಕಳಸಾ ಬಂಡೂರಿ ಹೋರಾಟ ಸಮಿತಿಯ ಅಧ್ಯಕ್ಷ ವಿಜಯ ಕುಲಕರ್ಣಿ ಹೇಳಿದರು.
ಈ ಕುರಿತು ಹೇಳಿಕೆ ನೀಡಿರುವ ಅವರು, ಇದು ಕೇವಲ ಸಾಹಿತ್ಯ ಪರಿಷತ್ ಆದರೆ ಕೆಲವು ಹಿತಾಸಕ್ತಿಗಳಿಗೆ ಮತ್ತು ರಾಜಕಾರಣಿಗಳಿಗೆ ವೈಯಕ್ತಿಕ ವರ್ಚಸ್ಸಿಗೆ ಈ ಸಮ್ಮೇಳನ ಮಾಡಿದ್ದಾರೆಂದು ಆರೋಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.