ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಗನ್ಮ್ಯಾನ್ ಪಿಸ್ತೂಲಿಂದ ಗುಂಡು ಸಿಡಿದು ಶಾಸಕ ಸಿ.ಸಿ. ಪಾಟೀಲ್ ಗೆ ಗಾಯ

Rashmi Kasaragodu
Updated On : 18 Mar 2013, 12:19 pm

ಗದಗ: ನರಗುಂದ  ಕ್ಷೇತ್ರದ ಶಾಸಕ ಸಿ.ಸಿ. ಪಾಟೀಲ್ ಅವರ ಗನ್ಮ್ಯಾನ್ನ ಪಿಸ್ತೂಲಿನಿಂದಲೇ ಆಕಸ್ಮಿಕವಾಗಿ ಗುಂಡು ಸಿಡಿದು, ಅವರ ಎಡಗೈಗೆ ಗಾಯವಾದ ಘಟನೆ ಭಾನುವಾರ ರಾತ್ರಿ ರೋಣ ತಾಲೂಕಿನ ಮೆಣಸಗಿ ಬಳಿ ನಡೆದಿದೆ. ಶಾಸಕ ಸಿ.ಸಿ. ಪಾಟೀಲ್ ಅವರನ್ನು ಹುಬ್ಬಳ್ಳಿಯ ಲೈಫ್ಲೈನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಭಾನುವಾರ ರಾತ್ರಿ ಮೆಣಸಗಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾಗ ಈ ದುರ್ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಪಾಟೀಲ್ರಿಗೆ ಸ್ಥಳೀಯರು ಕಾರ್ಯಕ್ರಮ ಮಾಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕೆಲಕಾಲ ಶಾಸಕರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಕೆಲವರು ತೀರಾ ಅನುಚಿತವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವರ ಗನ್ ಮ್ಯಾನ್ ಮಧ್ಯೆ ಪ್ರವೇಶಿಸಿ ಅವರನ್ನು ಚದುರಿಸಲು ಪ್ರಯತ್ನಿಸಿದ್ದು, ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ತನ್ನ ಬಳಿಯಿಂದ ಗನ್ ಹೊರತೆಗೆಯುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಎಡಗೈಗೆ ತಗುಲಿದೆ. ಗಾಯಗೊಂಡಿದ್ದ ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement