ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನಾಳೆ ಯಳವತ್ತಿಯಲ್ಲಿ ಪರಿಶಿಷ್ಟ ಪಂಗಡದ ಬೃಹತ್ ಸಮಾವೇಶ

Mainashree
Updated On : 19 Mar 2013, 10:49 am

ಕನ್ನಡಪ್ರಭ ವಾರ್ತೆ, ಲಕ್ಷ್ಮೇಶ್ವರ, ಮಾ. 18
ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಪಂಗಡದ ಸಮಾವೇಶವನ್ನು ಮಾ. 20ರ ಮಧ್ಯಾಹ್ನ 1 ಗಂಟೆಗೆ ತಾಲೂಕಿನ ಯಳವತ್ತಿ ಗ್ರಾಮದ ಕೋಟೆ ಆವರಣದಲ್ಲಿ ನಡೆಸಲಾಗುವುದು ಎಂದು ಗದಗ ಜಿಲ್ಲಾ ಕಾಂಗಛ್ರೆಸ್ ಪಕ್ಷದ ಅಧ್ಯಕ್ಷ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಹೇಳಿದರು.
ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಪಂಗಡದ ಸಮಾವೇಶದಲ್ಲಿ ಪರಿಶಿಷ್ಟ ಪಂಗಡದ ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಟಿ. ಈಶ್ವರ ಹಾಗೂ ಸತೀಶ ಜಾರಕಿಹೊಳಿ, ಮಾಜಿ ಸಚಿವ ಎಚ್.ಕೆ. ಪಾಟೀಲ, ಜಿ.ಎಸ್. ಪಾಟೀಲ, ಬಿ.ಎಸ್. ಪಾಟೀಲ, ಡಿ.ಆರ್.ಪಾಟೀಲ, ಬಿ.ಆರ್. ಯಾವಗಲ್, ವಾಸಣ್ಣ ಕುರಡಗಿ ಹಾಗೂ ಶಿರಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣಗೌಡ ಪಾಟೀಲ, ಲಕ್ಷ್ಮೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಣ್ಣ ಅಂಗಡಿ, ಮುಂಡರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೇಮಂತಗೌಡ ಪಾಟೀಲ, ಯು.ಎನ್. ಹೊಳಲಾಪುರ ಹಾಗೂ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಮತ್ತು ಜಿಪಂ ಸದಸ್ಯರು ಆಗಮಿಸಲಿದ್ದಾರೆ. ಶಿರಹಟ್ಟಿ ಮತಕ್ಷೇತ್ರದ ಎಲ್ಲ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಜಿಪಂ ಸದಸ್ಯರು, ತಾಪಂ ಸದಸ್ಯರು, ವಿವಿಧ ಗ್ರಾಮಗಳ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು, ವಿವಿಧ ಸಂಘ ಸಂಸ್ಥೆಗಳಲ್ಲಿನ ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ಕಾರ್ಯಕರ್ತರು ಆಗಮಿಸಿ ಪಕ್ಷದ ಪರಿಶಿಷ್ಟ ಪಂಗಡದ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಕೋರಿದರು.
ಸುದ್ದಿಗೋಷ್ಠಿಯಲ್ಲಿ ಅಡಿವೆಪ್ಪ ಬೆಟಗೇರಿ, ಯು.ಎನ್. ಹೊಳಲಾಪುರ, ಶಿಗ್ಲಿ ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಲಮಾಣಿ, ಬಸಣ್ಣ ಮಲ್ಲರೆಡ್ಡಿ, ಶೇಖರಗೌಡ ಪಾಟೀಲ, ಬಸಣ್ಣ ಕಳಸದ, ದೇವಪ್ಪ ಲಮಾಣಿ, ನಾಗರಾಜ ಮಡಿವಾಳರ, ಬಸಣ್ಣ ಮುಂಡವಾಡ, ಬಟ್ಟೂರ ಗ್ರಾಪಂ ಸದಸ್ಯ ನಾಗರಾಜ ಪಾಟೀಲ, ಶಿವಣ್ಣ ಹತ್ತಾಳ, ಮಂಜುನಾಥ ಶ್ಯಾಮಣ್ಣವರ, ರಾಮಣ್ಣ ಜಿಡ್ಡಿಮನಿ, ಸೂರಣಗಿ ಗ್ರಾಪಂ ಮಾಜಿ ಅಧ್ಯಕ್ಯ ನಿಂಗಪ್ಪ ಕಾಶಿಕೋವಿ, ಕಲ್ಲಪ್ಪ ಗಂಗಣ್ಣವರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement