ನಾಳೆ ವಿದ್ಯುತ್ ವ್ಯತ್ಯಯ
ಗದಗ: 110 ಕೆವಿ ಶಿರಹಟ್ಟಿ ಉಪವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ವಿದ್ಯುತ್ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಮಾ. 23 ರಂದು 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಾರಣ 110 ಕೆವಿ ಶಿರಹಟ್ಟಿ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುತ್ತಿರುವ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ 11 ಕೆವಿ ವಿತರಣಾ ಮಾರ್ಗಗಳಲ್ಲಿ ಹಾಗೂ ಬಿಪಿಸಿಎಲ್ ಎಲಿಶಿರೂರ ಗಾಳಿಯಂತ್ರ ಘಟಕಕ್ಕೆ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಪ್ರಕಟಣೆ ಗಮನಿಸಿ ಹೆಸ್ಕಾಂ ಇಲಾಖೆಯೊಂದಿಗೆ ಸಹಕರಿಸುವಂತೆ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.