ಕಾಂಗ್ರೆಸ್ ಸದಸ್ಯರಿಗೆ ಇಂದು ಸನ್ಮಾನ
ಗದಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧಿಸಿ ಆಯ್ಕೆಯಾದ ಗದಗ ಜಿಲ್ಲೆಯ ಎಲ್ಲ ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆಯ ಸದಸ್ಯರಿಗೆ ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆ ಗದಗ ಜಿಲ್ಲಾ ಘಟಕದ ವತಿಯಿಂದ ಮಾ. 24ರಂದು ಸಂಜೆ 4 ಗಂಟೆಗೆ ಗದುಗಿನ ವೀರನಾರಾಯಣ ಕಲ್ಯಾಣ ಮಂಟಪದಲ್ಲಿ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಎಚ್.ಕೆ. ಪಾಟೀಲ, ಬಿ.ಆರ್. ಯಾವಗಲ್, ವಿಪ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಶಾಸಕ ಜಿ.ಎಸ್. ಪಾಟೀಲ, ಕೆಪಿಸಿಸಿ ಸದಸ್ಯ ಎಚ್.ಆರ್. ನಾಯಕ, ವಾಸಣ್ಣ ಕುರಡಗಿ ಹಾಗೂ ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಹ ಅಧ್ಯಕ್ಷ ಡಿ.ಆರ್. ಪಾಟೀಲ ಉಪಸ್ಥಿತರಿರುವರು. ಸಂಘಟನೆಯ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕ ಪ್ರಭು ಮೇಟಿ ಹಾಗೂ ಗದಗ ತಾಲೂಕು ಸಂಚಾಲಕ ಪ್ರಭು ಹುಡೇದ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.