ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸೋಲಾರ್ ದೀಪದ ಸದುಪಯೋಗ ಪಡೆಯಿರಿ

Rashmi Kasaragodu
Updated On : 25 Mar 2013, 10:40 am

ಹೊಳೆಆಲೂರ:  ಇಂದು ರಾಜ್ಯಾದ್ಯಂತ ವಿದ್ಯುತ್ ಕಣ್ಣಾಮುಚ್ಚಾಲೆ ಆಡುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೋಣದ ಎಸ್.ಆರ್. ಪ್ರತಿಷ್ಠಾನದ ವತಿಯಿಂದ ಶಿಕ್ಷಣಕ್ಕಾಗಿ ಬೆಳಕು ಕಾರ್ಯಕ್ರಮದ ಅಡಿಯಲ್ಲಿ ಸೋಲಾರ್ ದೀಪಗಳನ್ನು ವಿತರಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಈ ಸೋಲಾರ್ ದೀಪಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಜಿ.ಎಸ್. ಪಾಟೀಲ ಕರೆ ನೀಡಿದರು.
ಈಚೆಗೆ ಅವರು ಸಮೀಪದ ಬಸರಕೋಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಎಸ್.ಆರ್. ಪಾಟೀಲ ಪ್ರತಿಷ್ಠಾನ ರೋಣ, ಆರ್‌ಎಂಜೆಡ್ ಸಂಸ್ಥೆ ಮತ್ತು ಜೆಎಸ್‌ಡಬ್ಲ್ಯೂ ಸ್ಟೀಲ್ ಇವುಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಸೋಲಾರ ದೀಪಗಳನ್ನು ವಿತರಿಸಿ ಮಾತನಾಡಿದರು. ಇಂದು ಬಹುತೇಕ ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯುತ್‌ನ ಕಣ್ಣಾಮುಚ್ಚಾಲೆಯಿಂದಾಗಿ ಜ್ಞಾನಾರ್ಜನೆಗೆ ತೊಂದರೆ ಅನುಭವಿಸುವಂತಾಗಿದೆ. ಇದನ್ನರಿತು ರೋಣ ಮತಕ್ಷೇತ್ರದಲ್ಲಿರುವ ಎಲ್ಲ ಶಾಲೆಗಳಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೋಲಾರ್ ಲ್ಯಾಂಪ್ ವಿತರಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement