ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಪರೀಕ್ಷೆ: ಓರ್ವ ಡಿಬಾರ್

Rashmi Kasaragodu
Updated On : 28 Mar 2013, 10:54 am

ಗದಗ: ಬುಧವಾರ ಜರುಗಿದ ದ್ವಿತೀಯ ಪಿಯುಸಿ ಕನ್ನಡ ವಿಷಯದಲ್ಲಿ ಒಟ್ಟು 9760 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 9269 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 491 ಮಂದಿ ಗೈರು ಹಾಜರಾಗಿದ್ದಾರೆ. ಗಜೇಂದ್ರಗಡದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಓರ್ವ ವಿದ್ಯಾರ್ಥಿ ಡಿಬಾರ್ ಆಗಿದ್ದಾನೆ ಎಂದು ಪಪೂ ಶಿಕ್ಷಣ ಮತ್ತು ವೃತ್ತಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂದರ್ಶನ ರದ್ದು
ಗದಗ:
ಬೇಸಿಕ್ ಕಂಪ್ಯೂಟರ್ ತರಬೇತಿಗಾಗಿ ಮಾ. 28ರಂದು ಬೆಳಗ್ಗೆ 11 ಗಂಟೆಗೆ ಕರೆದ ಸಂದರ್ಶನವನ್ನು ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯರುವ ಕಾರಣ ರದ್ದುಪಡಿಸಲಾಗಿದೆ. ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದೆಂದು ಜಿಪಂ ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದ ಉಪನಿರ್ದೇಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಹಸೀಲ್ದಾರ್ ಭೇಟಿ
ನರೇಗಲ್ಲ:
ನರೇಗಲ್ಲ ಪಪಂ ವ್ಯಾಪ್ತಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಲಿಖಿತ ದೂರು ಬಂದ ಹಿನ್ನೆಲೆಯಲ್ಲಿ ಬುಧವಾರ ರೋಣ ತಹಸೀಲ್ದಾರ ಪಿ.ಎಚ್. ಕಡಿವಾಲ ಕಾಮಗಾರಿ ಸ್ಥಳಕ್ಕೆ ಹಾಗೂ ಪಪಂಗೆ ಭೇಟಿ ನೀಡಿ ಕಡತ ಪರಿಶೀಲಿಸಿದರು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೇ ಇರುವುದು ಸಾರ್ವಜನಿಕರಲ್ಲಿ ಅನುಮಾನ ಮೂಡಿಸಿದೆ.

ನೀರು ಪೂರೈಕೆ ಮಾಹಿತಿ
ಗದಗ:
ರಾಜಾಜಿ ರಸ್ತೆಯಿಂದ ಬಣ್ಣ ನಗರದ ವರೆಗೆ, ಬೆಟಗರಿಯ ಕಿಲ್ಲಾದಿಂದ ಗಾರ್ಗಿ ಪೇಟೆ ವರೆಗೆ, ನರಸಾಪುರ ನೇಕಾರ ಕಾಲನಿಯಲ್ಲಿ ತುಂಗಭದ್ರಾ ನದಿನೀರು ಪೂರೈಕೆ ಮಾಡಲಾಗುವುದು. ಅವಳಿ ನಗರದಲ್ಲಿ ನದಿ ನೀರು ಪೂರೈಕೆ ಮಾಡುವ ಭಾಗಗಳನ್ನು ಹೊರತುಪಡಿಸಿ ಆಯಾ ಭಾಗಗಳಲ್ಲಿರುವ ಪವರ್ ಪಂಪ್‌ಗಳ ಮೂಲಕ ನೀರನ್ನು ಪೂರೈಕೆ ಮಾಡಲಾಗುವುದು ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.

ಮಟ್ಕಾ: ಓರ್ವನ ಬಂಧನ
ಗದಗ:
ನಗರದ ವಿಜಯ ಕಲಾಮಂದರ ರಸ್ತೆಯ ಕೃಷ್ಣಾ ಚಿತ್ರಮಂದಿರದ ಎದುರುಗಡೆ ವ್ಯಕ್ತಿಯೋರ್ವ ಮಟ್ಕಾ ನಂಬರ್ ಬರೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂದಿತ ವ್ಯಕ್ತಿಯಿಂದ ರು. 2,132 ನಗದು ಹಾಗೂ ಮಟ್ಕಾ ಚೀಟಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಗಳ್ಳರ ಬಂಧನ
ಗದಗ:
ಚಲಿಸುವ ರೈಲುಗಳಲ್ಲಿ ಪ್ರಯಾಣಿಕರ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗುತ್ತಿದ್ದ ಇಬ್ಬರು ಸರಗಳ್ಳರನ್ನು ಬುಧವಾರ ನಗರದ ಬಡಾವಣೆ ಠಾಣಾ ವ್ಯಾಪ್ತಿಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸಂತೋಷ ಹಿರೇಮಠ ಹಾಗೂ ಪ್ರಭುಗೌಡ ಭರಮಗೌಡ್ರ ಎಂದು ಗುರುತಿಸಲಾಗಿದ್ದು, ಬಂಧಿತ ಆರೋಪಿಗಳಿಂದ ರು. 2 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement