ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಪರಿಶೀಲಿಸಿದ ಬಿಇಓ

Rashmi Kasaragodu
Updated On : 31 Mar 2013, 11:59 am

ಗಜೇಂದ್ರಗಡ: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವೆನಿಸಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಏಪ್ರಿಲ್ 1ರಿಂದ ರಾಜ್ಯಾದ್ಯಾಂತ ಆರಂಭವಾಗುತ್ತಿದ್ದು, ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಪಾಟೀಲ ಭೇಟಿ ನೀಡಿ ಪರೀಕ್ಷಾ ಕೇಂದ್ರದಲ್ಲಿ ಸಿದ್ಧತೆ ಪರಿಶೀಲಿಸಿದರು.
ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಪರಿಕ್ಷಾ ಕೇಂದ್ರದಲ್ಲಿ ಅಕ್ರಮ ತಡೆಗಟ್ಟುವ ಕುರಿತು ಸಹ ಶಿಕ್ಷಕರಿಗೆ ಮಾಹಿತಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ಒಟ್ಟು 11 ಕೇಂದ್ರಗಳಲ್ಲಿ 3406 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಇಬ್ಬರು ಸಿಟ್ಟಿಂಗ್ ಸ್ವಾಡ್ ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಪ್ರಶ್ನೆಪತ್ರಿಕೆ ವಿತರಣೆಗಾಗಿ 5 ಮಾರ್ಗಗಳನ್ನು ರಚಿಸಲಾಗಿದೆ. ಗಜೇಂದ್ರಗಡ, ರೋಣ, ನರೇಗಲ್, ಹೊಳೆಆಲೂರ ಕೇಂದ್ರಗಳಲ್ಲಿ ಪರೀಕ್ಷಾ ಅಕ್ರಮ ನಿಗ್ರಹ ಪಡೆ ರಚಿಸಲಾಗಿದೆ. ಪರೀಕ್ಷಾ ಕೇಂದ್ರದಿಂದ 200 ಮೀಟರ್ ಸುತ್ತ ನಿಷೇಧಾಜ್ಞೆ ವಿಧಿಸಲಾಗಿದೆ. ಈ ಸ್ಥಳದಲ್ಲಿರುವ ಎಲ್ಲ ಜೆರಾಕ್ಸ್ ಅಂಗಡಿಗಳನ್ನು ಹಾಗೂ ಅಕ್ರಮಗಳನ್ನು ಪ್ರೋತ್ಸಾಹಿಸುವ ಮಳಿಗೆಗಳನ್ನು ಬಂದ್ ಮಾಡಿಸಲಾಗುವುದು ಎಂದರು.
ಮುಖ್ಯೋಪಾಧ್ಯಾಯ ಡಿ.ಜಿ. ತಾಳಿಕೋಟಿ, ಎಸ್.ಎಫ್. ಜಾಲಿಹಾಳ, ಎಂ.ಡಿ. ಸರಕಾವಸ, ಆರ್.ಕೆ. ಮಾಳೋದೆ ಇದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement