ಹೊಳೆಆಲೂರಲ್ಲಿ ಶಾಂತ ಚುನಾವಣೆ
ಹೊಳೆಆಲೂರ: ನರಗುಂದ ವಿಧಾನಸಭಾ ಮತಕ್ಷೇತ್ರದ ಹೊಳೆಆಲೂರ ಗ್ರಾಮದಲ್ಲಿ ಭಾನುವಾರ ನಡೆದ ಮತದಾನದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮತಗಟ್ಟೆ ಸಂಖ್ಯೆ 37 ರಲ್ಲಿ ಮತದಾನಕ್ಕಾಗಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದರು. ಮತದಾನ ಶಾಂತಿಯುತವಾಗಿ ನಡೆಯಿತು.