ಗದಗ: ಅಂಗವಿಕಲರ ಕಲಾಮೇಳ ಇಂದಿನಿಂದ
ಗದಗ: ಬೆಂಗಳೂರಿನ ಚೈತ್ರ ಕಲಾನಿಕೇತನ ಸಾಂಸ್ಕೃತಿಕ ಸಂಘಟನೆ ವತಿಯಿಂದ ಗದಗ ಜಿಲ್ಲೆಯ ಅಂಧ, ಅಂಗವಿಕಲರ, ಮನೋವಿಕಲ ಹಾಗೂ ನಿರ್ಲಕ್ಷ್ಯಕ್ಕೆ ಒಳಗಾದ ಕಲಾವಿದರಿಗೆ ಸೂಕ್ತ ವೇದಿಕೆ ಒದಗಿಸಲು ಗದಗನ ವೀರೇಶ್ವರ ಪುಣ್ಯಾಶ್ರಮದಲ್ಲಿ ಮೇ 10 ಮತ್ತು 11ರಂದು ರಾಷ್ಟ್ರಮಟ್ಟದ ಕಲಾಮೇಳ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರಿನ ಚೈತ್ರಾ ಕಲಾನಿಕೇತನ ಸಂಸ್ಥೆಯ ಕಾರ್ಯದರ್ಶಿ ವಿಜಯರಾವ್ ಹೇಳಿದರು. ಸಂಜೆ 4ರಿಂದ ರಾತ್ರಿ 8ರ ತನಕ ಕಲಾಮೇಳ ಹಮ್ಮಿಕೊಳ್ಳಲಾಗಿದೆ. ಪ್ರತಿಭಾವಂತರಿಗೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೇದಿಕೆ ಕಲ್ಪಿಸಲಾಗುವುದು. ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ನೀಡಲಾಗುವುದು ಎಂದರು.