ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ತರಬೇತಿಗೆ ಆಹ್ವಾನ

Vishwanath S
Updated On : 12 May 2013, 10:57 am

ಗದಗ:  ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ಜೂ. 1ರಿಂದ 10 ತಿಂಗಳ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುವುದು. ಮೇ 15ರಿಂದ 25ರ ವರೆಗೆ ಅರ್ಜಿ ವಿತರಿಸಲಾಗುವುದು. ಮೇ 25ರೊಳಗೆ ಭರ್ತಿ ಮಾಡಿ ಸಲ್ಲಿಸಬೇಕು. ಮೇ 28ರಂದು ಬೆಳಗ್ಗೆ 10 ಗಂಟೆಗೆ ನಗರದ ಭೀಷ್ಮ ಕೆರೆಯ ಹತ್ತಿರದ ತೋಟಗಾರಿಕೆ ಉಪನಿರ್ದೇಶಕರ (ಜಿಪಂ) ಕಚೇರಿಯಲ್ಲಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು. ಹೆತ್ತವರು ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿ ಸಲ್ಲಿಸುವುದು ಕಡ್ಡಾಯ. ಸಾಮಾನ್ಯ ಅಭ್ಯರ್ಥಿಗಳಿಗೆ ರು. 10 ಮತ್ತು ಪರಿಶಿಷ್ಟ ಜಾತಿ-ಪಂಗಡದ ಅಭ್ಯರ್ಥಿಗೆ ರು. 5 ಅರ್ಜಿ ಶುಲ್ಕ ನಿಗದಿಪಡಿಸಿದೆ. ವಿವರಗಳಿಗೆ ಸಹಾಯಕ ತೋಟಗಾರಿಕೆ ನಿರ್ದೇಶಕರು ಅಥವಾ ತಾಲೂಕು ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement