ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ
ಗದಗ: ಶೇ. 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಿಲ್ಲಾ ವೀರಶೈವ ಪಂಚಮಸಾಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡುವ ಬಗ್ಗೆ ರಾಜ್ಯ ಸಮಿತಿ ನಿರ್ಧರಿಸಿದೆ. ಅರ್ಹರು ಮೇ 20ರ ಒಳಗಾಗಿ ಅಂಕಪಟ್ಟಿಯ ಯಥಾಪ್ರತಿ ಹಾಗೂ ಭಾವಚಿತ್ರದ ಜತೆ ಗದಗ ಜಿಲ್ಲಾ ವೀರಶೈವ ಪಂಚಮಸಾಲಿ ಸಮಾಜದ ಸಮುದಾಯ ಭವನದ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅಥವಾ ಸಮಾಜದ ಜಿಲ್ಲಾಧ್ಯಕ್ಷ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯವರಿಗೆ ನೀಡಬೇಕು. ಮಾಹಿತಿಗಾಗಿ ಸಮಿತಿ ಜಿಲ್ಲಾಧ್ಯಕ್ಷ ಎಫ್.ವಿ. ಮರಿಗೌಡ್ರ, ಮೊ. 9480370568, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಅಪ್ಪಣ್ಣವರ, ಮೊ. 962888033 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.