ನ್ಯೂ ಲಿಟ್ಲ್ ಫ್ಲಾವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ
ರೋಣ: ಸ್ಥಳೀಯ ಶ್ರೀ ಶರಣರ ಶಿಕ್ಷಣ ಸಮಿತಿಯ ನ್ಯೂ ಲಿಟ್ಲ್ ಫ್ಲಾವರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 2012-13ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಎಸ್.ಬಿ. ಬಳಿಗೇರ ತಿಳಿಸಿದ್ದಾರೆ.
ಪರೀಕ್ಷೆಗೆ ಕುಳಿತ ಒಟ್ಟು 41 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
4 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಮತ್ತು ಓರ್ವ ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾನೆ. ಶರಣಪ್ಪಗೌಡ ರಾಯನಗೌಡ್ರ ಶೇ. 90 ಅಂಕ ಪಡೆದು ಪ್ರಥಮ, ಶೃತಿ ಸಣ್ಣಕ್ಕಿ ಶೇ. 88 ರಷ್ಟು ಅಂಕ ಪಡೆದು ದ್ವಿತೀಯ ಸ್ಥಾನ ಮತ್ತು ಸೌಮ್ಯಾ ಕಡಗದ ಶೇ. 85 ರಷ್ಟು ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾಳೆ.