ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಬಸವಣ್ಣನವರ ತತ್ವಗಳು ಪ್ರಸ್ತುತ: ಹೂಲಿ

Mainashree
Updated On : 15 May 2013, 10:56 am

ಕನ್ನಡಪ್ರಭ ವಾರ್ತೆ, ಗದಗ, ಮೇ 14
ಸಮಾನತೆಯ ಹರಿಕಾರ, ವಿಶ್ವಮಾನವ, ವಿಶ್ವಗುರು ಬಸವಣ್ಣನವರ ತತ್ವ ಸಿದ್ಧಾಂತಗಳು, ಅವರ ಶೋಷಣೆ ಮುಕ್ತ ಸಮಾಜದ ನಿರ್ಮಾಣದ ಕನಸು, 12ನೇ ಶತಮಾನದಲ್ಲಿಯೇ ಮಾಡಿದ ಕ್ರಾಂತಿಕಾರಕ ಬದಲಾವಣೆಗಳು ಇಂದಿಗೂ ನೆನಪಿನಲ್ಲಿಡುವಂತಗಳಾಗಿದ್ದು, ಅವರ ವಿಚಾರಗಳು ಸರ್ವಕಾಲಕ್ಕೂ ಪ್ರಸ್ತುತ ಎಂದು ಜಿಲ್ಲಾ ಡಿಎಸ್‌ಎಸ್ ನಾಯಕ ಸತೀಶ ಹೂಲಿ ಹೇಳಿದರು.
ಅವರು ಸೋಮವಾರ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗದಗ ತಾಲೂಕು ಶಾಖೆಯ ವತಿಯಿಂದ ಹಮ್ಮಿಕೊಂಡ ಬಸವಣ್ಣವರ 880ನೇ ಜಯಂತಿ ಹಾಗೂ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇವನಾರವ, ಇವನಾರವ, ಎಂದೇನಿಸದೆ ಇವ ನಮ್ಮವ ಇವ ನಮ್ಮವ ಎನ್ನುವಂತ ಅದ್ಭುತವಾದ ಮಾನವೀಯ ಮೌಲ್ಯಗಳ ನಿಧಿಯನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಮೂಲಕ ಬಸವಣ್ಣನವರು ಸಮಾಜದಲ್ಲಿನ ಜಾತಿ, ಬೇಧ, ಭಾವವನ್ನು ಹೋಗಲಾಡಿಸಲಿ. ಎಲ್ಲರಲ್ಲಿಯೂ ಸಮಾತನೆಯನ್ನು ಬೆಳೆಸುವಲ್ಲಿ ಪ್ರಾಮಾಣಿಕರಾಗಿ ಶ್ರಮಿಸಿದ್ದು, ಇಂಥಹ ಮಹಾನ್ ವ್ಯಕ್ತಿ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ ಎಂದರು.
ಅತಿಥಿಗಳಾಗಿ ಆಗಮಿಸಿದ್ದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಸ್.ಎನ್. ಬಳ್ಳಾರಿ ಮಾತನಾಡಿ, ಬಸವಣ್ಣನವರ ವಿಚಾರಗಳು ಅವರ ಜೀವನ ಚರಿತ್ರೆ ಕುರಿತು ಮಾರ್ಮಿಕವಾಗಿ ತಿಳಿಸಿ ಬುದ್ಧ-ಬಸವ-ಅಂಬೇಡ್ಕರವರ ವಿಚಾರಗಳು ಸಮಾನತೆಗಾಗಿ ತಳಪಾಯ ಹಾಕಲು ಪ್ರಯತ್ನಿಸಿದಂತವುಗಳಾಗಿದ್ದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆ ಸಾರ್ಥಕತೆ ಪಡೆಯುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಸಂಚಾಲಕ ಮಾರುತಿ ಗುಡಿಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಸವೇಶ್ವರರ ಆದರ್ಶಗಳನ್ನು ಪಾಲಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ಪರಶುರಾಮ ಪೂಜಾರ, ಯುವರಾಜ ಬಳ್ಳಾರಿ, ರವಿ ಹಾದಿಮನಿ ಮುಂತಾದವರು ಉಪಸ್ಥಿತರಿದ್ದರು.
ಸಂತೋಷ ಬಳ್ಳಾರಿ ಸ್ವಾಗತಿಸಿದರು. ವಿನಾಯಕ ಬಳ್ಳಾರಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement