ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸಿದ್ದರಾಮಯ್ಯ ಅಧಿಕಾರ ಸ್ವೀಕಾರ: ವಿಜಯೋತ್ಸವ

Lingaraj Badiger
Updated On : 16 May 2013, 12:07 pm

ಕನ್ನಡಪ್ರಭ ವಾರ್ತೆ, ಗದಗ, ಮೇ 15
ರಾಜ್ಯದ 28ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸೋಮವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದ ವಾರ್ಡ್ ನಂ. 1ರ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ಎಸ್.ಎಂ. ಕೃಷ್ಣ ನಗರದ ಆಶ್ರಯ ಕಾಲೋನಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗಣೇಶ ಕಲಬುರ್ಗಿ ಮಾತನಾಡಿ,  ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಅಧಿಕಾರ ಚುಕ್ಕಾಣಿ ಹಿಡಿದಿರುವುದು ಸಂತಸ ತಂದಿದೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನಪರ ಯೋಜನೆಗಳು ಜಾರಿಯಾಗುವ ಮೂಲಕ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಶುಭ ಹಾರೈಸಿದರು.
ಪ್ರಭು ಶಹಪುರ ಮಾತನಾಡಿ, ಸಿದ್ದರಾಮಯ್ಯನವರು ಈ ರಾಜ್ಯದ ಅಭಿವೃದ್ಧಿಗಾಗಿ ತಮಗೆ ಲಭಿಸಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲಿ. ಮಾದರಿ ರಾಜ್ಯವನ್ನಾಗಿಸುವಲ್ಲಿ ಪ್ರಾಮಾಣಿಕರಾಗಿ ಶ್ರಮಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸೋಮನಗೌಡ್ರ ಪಾಟೀಲ, ಬಸವರಾಜ ಕಡೇಮನಿ, ವಸಂತ ಸಿದ್ದಮ್ಮನಹಳ್ಳಿ, ಅನಿಲ ಸಿದ್ದಮ್ಮನಹಳ್ಳಿ, ಮಹಾಂತೇಶ ಮನ್ನಮ್ಮನವರ, ಎಸ್.ಆರ್. ಕೊಡ್ಲಿವಾಡ, ಪ್ರಕಾಶ ಕಮಡೊಳ್ಳಿ, ನಗರಸಭೆಯ ಮಾಜಿ ಸದಸ್ಯೆ ಶಕುಂತಲಾ ಅಕ್ಕಿ, ಸೋಮಣ್ಣ ಚೋರಗಸ್ತೆ, ಶರಣಪ್ಪ ಬಿನ್ನಾಳ, ಎಸ್.ಆರ್. ಮೂಲಿಮನಿ, ರತ್ನಮ್ಮ ಹಿರೇಮಠ, ದದ್ದುಗೌಡ ಪಾಟೀಲ, ಸತ್ತಾರಸಾಬ ಡೆಂಕೆದ, ಹೋಳಬಸಪ್ಪ ಅಕ್ಕಿ, ಶೇಖರ ರಾಟಿ, ಕುಮಾರ ಜೊತ್ತೆಪ್ಪನವರ ಇತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement