ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಅಭಿವೃದ್ಧಿಗೆ ಶ್ರಮಿಸಿದ ತೃಪ್ತಿ ಇದೆ: ಹೊಂಬಾಳಿ

Rashmi Kasaragodu
Updated On : 22 May 2013, 11:51 am

ಗದಗ: ಪ್ರಾಧಿಕಾರದಲ್ಲಿ ಸಿಬ್ಬಂದಿ ಕೊರತೆ ಹಾಗೂ ಹಿರಿಯ ಅಧಿಕಾರಿಗಳ ನಿರಾಸಕ್ತಿಯ ಕಾರಣ ಪ್ರಾಧಿಕಾರದ ಕಾರ್ಯಗಳು ಮತ್ತು ಯೋಜನೆಗಳು ವಿಳಂಬಗೊಳ್ಳಲು ಕಾರಣವಾಗಿವೆ ಎಂದು ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಶ್ರೀಕೃಷ್ಣ ಹೊಂಬಾಳಿ ಹೇಳಿದರು.
ಮಂಗಳವಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 17 ತಿಂಗಳ ಅಧ್ಯಕ್ಷ ಅಧಿಕಾರಾವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಶ್ರಮಿಸಿದ್ದೇನೆ. ವಿವಿಧ ಸಮಾಜಗಳಿಗೆ, ಸರ್ಕಾರಿ ಕಚೇರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಕಟ್ಟಡಗಳಿಗೆ ನಿವೇಶನ ಒದಗಿಸಿದ್ದಾಗಿದೆ. ನಗರ ಸೌಂದರ್ಯಕ್ಕಾಗಿ ವಿವಿಧ ಪ್ರದೇಶಗಳಲ್ಲಿ ಉದ್ಯಾನವನ ಅಭಿವೃದ್ಧಿಪಡಿಸಿ ಮೇಲುಸ್ತುವಾರಿಯನ್ನು ಸ್ಥಳೀಯ ಸಂಘ ಸಂಸ್ಥೆಗಳಿಗೆ ಜವಾಬ್ದಾರಿ ನೀಡಲಾಗಿದೆ. ನಗರಕ್ಕೆ ಈಜುಗೊಳದ ವ್ಯವಸ್ಥೆ ಕಲ್ಪಿಸಲು ಜಾಗೆಯನ್ನು ಗುರುತಿಸಿ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement