ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಇಂದು ಎಚ್.ಕೆ. ಪಾಟೀಲ ಗದಗಕ್ಕೆ

Rashmi Kasaragodu
Updated On : 22 May 2013, 11:49 am

ಗದಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ. ಪಾಟೀಲ ಮೇ 22 ರಂದು ನಗರಕ್ಕೆ ಆಗಮಿಸಿ ಸಂಜೆ 4.30ಕ್ಕೆ ಗದಗ-ಬೆಟಗೇರಿ ಅವಳಿ ನಗರ ಹಾಗೂ ಗದಗ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಸಂಜೆ 6 ಗಂಟೆಗೆ ಜಿಲ್ಲೆಯಲ್ಲಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕುರಿತು ಜಿಪಂ ಸಭಾಭವನದಲ್ಲಿ ಅಧಿಕಾರಿಗಳ ಸಭೆ ನಡೆಸುವರು. ಮೇ 23ರಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಪ್ರಗತಿ ಸೇರಿದಂತೆ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವರು. ಮೇ 24ರಂದು ಬೆಳಗ್ಗೆ 10.30ಕ್ಕೆ ಜಿಪಂ ಸಭಾಭವನದಲ್ಲಿ ಗದಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕುಡಿವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement