ನೀರು ಪೂರೈಕೆಯಲ್ಲಿ ವ್ಯತ್ಯಯ
ಗದಗ: ಗದಗ-ಬೆಟಗೇರಿ ನೀರು ಪೂರೈಕೆಯಾಗುತ್ತಿದ್ದ ತುಂಗಭದ್ರಾ ನೀರಿನ ಮುಖ್ಯ ಕೊಳವೆ ಮುಂಡರಗಿ ತಾಲೂಕಿನ ಕದಾಂಪುರ ಗ್ರಾಮದ ಬಳಿ ನಾಲಾ ದುರಸ್ತಿ ಕಾರ್ಯ ನಡೆಯುತ್ತಿದೆ. ನಾಲಾ ದುರಸ್ತಿ ಕಾರ್ಯ ಪೂರ್ಣಗೊಂಡ ಅನಂತರ ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆ ಮಾಡಲಾಗುವುದು ಎಂದು ಜಲಮಂಡಳಿಯ ಪ್ರಕಟಣೆ ತಿಳಿಸಿದೆ.