ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
ಗದಗ: ಜೂನ್-2013 ರಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ-ಬಾಲಕಿಯರ ವಿದ್ಯಾರ್ಥಿ ನಿಲಯಗಳು ಪ್ರಾರಂಭವಾಗುತ್ತಿದ್ದು, 2013ಕ್ಕೆ ನವೀಕರಣ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಖಾಲಿ ಉಳಿಯುವ ಸ್ಥಳಗಳಿಗೆ ನಿಯಮಾನುಸಾರವಾಗಿ ವಾರ್ಷಿಕ ಆದಾಯ ರು. 44,500 (ಎಸ್ಸಿ, ಎಸ್ಟಿ, ಪ್ರವರ್ಗ-1 ಹೊರತುಪಡಿಸಿ) 5 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬಹುದು. ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಆಯಾ ನಿಲಯ ಮೇಲ್ವಿಚಾರಕರಿಗೆ ಅಥವಾ ಮುಂಡರಗಿಯ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಕಚೇರಿಗೆ ಜೂನ್ 10 ರೊಳಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ನಿಲಯದಲ್ಲಿ ಉಚಿತ ಊಟ, ಪುಸ್ತಕ, ಹಾಸಿಗೆ ಹೊದಿಕೆ, ಸಂಕೀರ್ಣ ಸಾಮಗ್ರಿ ಹಾಗೂ ವಸತಿ ಸೌಕರ್ಯ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.